ಕಾಂಚೀಪುರಂ : (Kanchipuram explosion) ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಕಾಂಚೀಪುರಂನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 15 ಮಂದಿಯಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಯ ವೇಳೇ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏಳಕ್ಕೇರಿದೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಫೋಟದ ಸ್ಥಳಕ್ಕೆ ಅಗ್ನಿಶಾಮಕ ಟೆಂಡರ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ತಕ್ಷಣವೇ ರವಾನಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಂಚೀಪುರಂ ಜಿಲ್ಲಾಧಿಕಾರಿ ಎಂ ಆರತಿ, ಉಪ ಪೊಲೀಸ್ ಮಹಾ ನಿರೀಕ್ಷಕ ಪಿ ಪಕಲವನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಎಂ ಸುಧಾಕರ್ ಅವರು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದರು.
ಇದನ್ನೂ ಓದಿ : Anti-Modi poster: ಪ್ರಧಾನಿ ನರೇಂದ್ರ ಮೋದಿ ವಿರೋಧಿ ಪೋಸ್ಟರ್ ಪತ್ತೆ : 6 ಮಂದಿಯ ಬಂಧನ
ಇದನ್ನೂ ಓದಿ : ಸಚಿವರ ಮನೆ ಮುಂದೆ ರೌಡಿ ಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ : ಆರೋಪಿ ಅರೆಸ್ಟ್
ಸ್ಫೋಟದ ನಂತರ ಆಂಬ್ಯುಲೆನ್ಸ್ ಸ್ಥಳಕ್ಕೆ ಬರುವ ಮೊದಲು ಸ್ಥಳೀಯರು ಕೂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಟೋಗಳಲ್ಲಿ ಸಾಗಿಸಲು ಪ್ರಾರಂಭಿಸಿದರು ಎಂದು ವರದಿಯಾಗಿದೆ.
ಇದನ್ನೂ ಓದಿ : ಸರಕಾರಿ ಬಸ್ ಕಾರಿಗೆ ಢಿಕ್ಕಿ : 3 ಸಾವು, 9 ಮಂದಿಗೆ ಗಾಯ
ಸಚಿವೆ ಮನೆ ಮುಂದೆ ರೌಡಿಶೀಟರ್ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ: ಓರ್ವ ಆರೋಪಿ ಅರೆಸ್ಟ್
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆನೇ ಭಯಾನಕ ಘಟನೆಯೊಂದು ನಡೆದಿದ್ದು, ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆಯೇ ರೌಡಿಶೀಟರ್ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ ನಡೆದಿದೆ. ಸದ್ಯ ಗಾಯಾಳು ರೌಡಿಶೀಟರ್ ಅನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂತ್ರಸ್ತನ ಸ್ಥಿತಿ ಚಿಂತಾಜನಕವಾಗಿದೆ. ಮಾರ್ಚ್ 21 ರಂದು ಬೆಳಿಗ್ಗೆ ಸುಮಾರು 5 ರಿಂದ 6 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಶಶಿಕಲಾ ಜೊಲ್ಲೆ ಮನೆ ಮುಂದಯೇ ಕಿಡಿಗೇಡಿಗಳು ತನ್ನ ಸ್ನೇಹಿತನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನ ನಡೆಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾರೆ.
Kanchipuram explosion: Firecracker factory blast: 7 killed