ಶಿವಮೊಗ್ಗ: (Stone pelting on Yeddyurappa’s house) ಶಿಕಾರಿಪುರದಲ್ಲಿ ಎಸ್ ಟಿ ಎಸ್ ಸಿ ಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಲಂಬಾಣಿ ಸಮುದಾಯದವರಿಂದ ಪ್ರತಿಭಟನೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ನೂತನ ಮೀಸಲಾತಿ ರದ್ದುಪಡಿಸುವಂತೆ ಪ್ರತಿಭಟನಾ ಕಾರರು ಆಗ್ರಹಿಸಿದ್ದಾರೆ.
ಸದಾಶಿವ ವರದಿ ಜಾರಿಗೊಳಿಸಿದ್ದಕ್ಕಾಗಿ ಪ್ರತಿಭಟನಾಕಾರರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದು, ಶಿವಮೊಗ್ಗದ ಶಿಕಾರಿಪುರದಲ್ಲಿ ಬಂಜಾರ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಲಂಬಾಣಿ, ಬೋವಿ, ಕೊರಮ ಹಾಗೂ ಕೊರಚ ಸಮುದಾಯದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ, ರಾಘವೇಂದ್ರ ಭಾವಚಿತ್ರವನ್ನು ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಪ್ರಧಾನಿ ಮೋದಿ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದಿದ್ದಾರೆ. ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಯಡಿಯೂರಪ್ಪ ಅವರು ನೂತನವಾಗಿ ನಿರ್ಮಿಸಿರುವ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಇದನ್ನೂ ಓದಿ : JDS Pancharatna yatra : ಪಂಚರತ್ನ ರಥಯಾತ್ರೆ, ಹಳೆಮೈಸೂರು ಭಾಗದಲ್ಲಿ ದಳಪತಿಗಳ ಮೋಡಿ: ಈ ಭಾರಿಯೂ ಜೆಡಿಎಸ್ ಕಿಂಗ್ ಮೇಕರ್ ?
ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ತಡಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದೆ. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್ಗಳನ್ನು ಸಹ ಹರಿದು ಹಾಕಲಾಗಿದೆ. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ. ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದಾರೆ. ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿಲಾಯಿತು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಶಿಕಾರಿಪುರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : Rahul Gandhi Ramya : ತಂದೆ, ತಾಯಿ ಬಳಿಕ ರಾಹುಲ್ ಗಾಂಧಿನೇ ಎಲ್ಲಾ : ವಿಕೆಂಡ್ ವಿತ್ ರಮೇಶ್ ಶೋದಲ್ಲಿ ರಮ್ಯ ಮನದಾಳ
SC, ST reservation fight erupted: Stone pelting on Yeddyurappa’s house