ಮಂಗಳವಾರ, ಏಪ್ರಿಲ್ 29, 2025
Homejob NewsCRPF ನೇಮಕಾತಿ 2023: 1.30 ಲಕ್ಷ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

CRPF ನೇಮಕಾತಿ 2023: 1.30 ಲಕ್ಷ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

- Advertisement -

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿಯಲ್ಲಿ 1.30 ಲಕ್ಷ ಕಾನ್ಸ್‌ಟೇಬಲ್‌ಗಳ ಹುದ್ದೆಗಳಿಗೆ ಸಂಬಂಧಿಸಿದಂತೆ ಗೃಹ ವ್ಯವಹಾರಗಳ ಸಚಿವಾಲಯವು ಅಧಿಸೂಚನೆಯನ್ನು (CRPF Recruitment 2023) ಬಿಡುಗಡೆ ಮಾಡಿದೆ. ಸಿಆರ್‌ಪಿಎಫ್ ಒಟ್ಟು 1,29,929 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಈ ಪೈಕಿ 1,25,262 ಪುರುಷ ಅಭ್ಯರ್ಥಿಗಳಿಗೆ ಮತ್ತು 4667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. CRPF ನಲ್ಲಿ ನೇಮಕಾತಿಗಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ crpf.gov.in ನಲ್ಲಿ ಈ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಸಿಆರ್‌ಪಿಎಫ್ ಕಾನ್ಸ್‌ಟೇಬಲ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸುವ ವಿಧಾನ :

  • ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್‌ಸೈಟ್- crpf.gov.in ಗೆ ಲಾಗ್‌ ಇನ್‌ ಆಗಬೇಕು.
  • ನಂತರ ಮುಖ್ಯ ವೆಬ್‌ಸೈಟ್ ಅನ್ನು ನಮೂದಿಸಬೇಕು.
  • ಈಗ ಕೆಳಗೆ ಸ್ಕ್ರಾಲ್ ಮಾಡಿ ಮತ್ತು ‘ನೇಮಕಾತಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಬೇಕು.
  • ಸಿಆರ್‌ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ಅಗತ್ಯವಿರುವ ವಿವರಗಳನ್ನು ಒದಗಿಸುವ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
  • ಈಗ ನೀವು ರಚಿಸಿದ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗ್‌ ಇನ್ ಆಗಬೇಕು.
  • ಸಿಆರ್‌ಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಫಾರ್ಮ್ ಅನ್ನು ಭರ್ತಿ ಮಾಡಬೇಕು.
  • ಅಗತ್ಯ ದಾಖಲೆಗಳು ಮತ್ತು ಫೋಟೋಗಳನ್ನು ಸರಿಯಾಗಿ ಅಪ್ಲೋಡ್ ಮಾಡಬೇಕು.
  • ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಬೇಕು.
  • ಸಿಆರ್‌ಪಿಎಫ್ ಕಾನ್ಸ್ಟೇಬಲ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು ನೇರ ಲಿಂಕ್ ಮೇಲೆ ಕ್ಲಿಕ್‌ ಮಾಡಬೇಕು.

ವಯೋಮಿತಿ ವಿವರ :
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಆಗಸ್ಟ್ 1, 2023 ರಂತೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 23 ವರ್ಷ ವಯಸ್ಸು ಮೀರಿರಬಾರದು.
ಅಭ್ಯರ್ಥಿಗಳು 02/08/1996 ಕ್ಕಿಂತ ಮೊದಲು ಮತ್ತು 01/08/2002 ಕ್ಕಿಂತ ನಂತರ ಹುಟ್ಟಿರಬಾರದು.

ವಯಸ್ಸಿನ ಸಡಿಲಿಕೆ :
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮತಿಯನ್ನು ಸಿಆರ್‌ಪಿಎಫ್ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ ವಿವರ :
ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇಂದ್ರ ಸರಕಾರ ಅಥವಾ ರಾಜ್ಯ ಸರಕಾರದಿಂದ ಗುರುತಿಸಲ್ಪಟ್ಟ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನವನ್ನು ಉತ್ತೀರ್ಣರಾಗಿರಬೇಕು ಅಥವಾ ಮಾಜಿ ಸೇನಾ ಸಿಬ್ಬಂದಿಯ ಸಂದರ್ಭದಲ್ಲಿ ಸಮಾನವಾದ ಸೇನಾ ಅರ್ಹತೆಯನ್ನು ಹೊಂದಿರಬೇಕು.

ಕಳೆದ ತಿಂಗಳು, ಗೃಹ ಸಚಿವಾಲಯವು ಮಾಜಿ ಅಗ್ನಿವೀರ್‌ಗಳು ಈಗ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‌ಎಫ್) ಉದ್ಯೋಗ ಖಾಲಿ ಹುದ್ದೆಗಳಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಪಡೆಯುತ್ತಾರೆ ಎಂದು ಘೋಷಿಸಿದೆ. ಅವರು ಅಗ್ನಿವೀರ್‌ಗಳ ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್‌ಗಳ ಭಾಗವಾಗಿದ್ದಾರೆಯೇ ಎಂಬುದರ ಆಧಾರದ ಮೇಲೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿದೆ.

ಮಾಜಿ ಅಗ್ನಿವೀರ್‌ಗಳ ಮೊದಲ ಬ್ಯಾಚ್‌ನ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ಐದು ವರ್ಷಗಳವರೆಗೆ ಮತ್ತು ಇತರ ಬ್ಯಾಚ್‌ಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳವರೆಗೆ ಸಡಿಲಗೊಳಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ : ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ 2023 : ಜನರಲ್ ಮ್ಯಾನೇಜರ್ ಹುದ್ದೆಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ 17 ಮತ್ತು 21 ವರ್ಷ ವಯಸ್ಸಿನ ಯುವಕರ ನೇಮಕಾತಿಗಾಗಿ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರಕಾರವು ಅನಾವರಣಗೊಳಿಸಿದೆ. ಹೆಚ್ಚಾಗಿ ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಆಧಾರದ ಮೇಲೆ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ನಾಲ್ಕು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನಂತರ, ಪ್ರತಿ ಬ್ಯಾಚ್‌ನಿಂದ ಶೇ. 25ರಷ್ಟು ನೇಮಕಗೊಂಡವರಿಗೆ ನಿಯಮಿತ ಸೇವೆಯನ್ನು ನೀಡಲಾಗುತ್ತದೆ.

CRPF Recruitment 2023: 1.30 Lakh Constable Vacancy, Apply Now

RELATED ARTICLES

Most Popular