ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಆದೇಶದಿಂದ ಸಂಪೂರ್ಣ ವಿನಾಯಿತಿ ನೀಡುವಂತೆ ರಾಜ್ಯ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಚಿಂತನೆ ನಡೆಸಿದೆ.

ಡೆಡ್ಲಿ ಮಹಾಮಾರಿಯ ಆರ್ಭಟ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸುಮಾರು 21 ರಾಜ್ಯದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ವೇಳೆಯಲ್ಲಿ ರಾಜ್ಯ ಸರಕಾರ ಪ್ರಧಾನಿ ಮೋದಿ ಅವರಿಗೆ ಮನವಿ ಮನವಿಗಳನ್ನು ಮಾಡಲು ಮುಂದಾಗಿದೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಹುತೇಕ ಸೇವೆಗಳನ್ನು ಈಗಾಗಲೇ ಪುನರಾರಂಭ ಮಾಡಲಾಗಿದ್ದು, ಬಾರ್ & ರೆಸ್ಟೋರೆಂಟ್, ಜಿಮ್, ಸ್ವಿಮ್ಮಿಂಗ್ ಪೂಲ್, ಶಾಲೆ, ಕಾಲೇಜು ಸೇರಿದಂತೆ ಉಳಿದ ಎಲ್ಲಾ ಸೇವೆಗಳನ್ನು ಪುನರಾರಂಭಿಸಲು ಅನುಮತಿಯನ್ನು ನೀಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.