ಸೋಮವಾರ, ಏಪ್ರಿಲ್ 28, 2025
HomeCrimeರಾಜ್ಯದ ರಾಜಧಾನಿಯಲ್ಲಿ ವರುಣನ ಆರ್ಭಟ : ಕಾರು ಮುಳುಗಿ ಯುವತಿ ಸಾವು, ನಾಲ್ವರ ರಕ್ಷಣೆ

ರಾಜ್ಯದ ರಾಜಧಾನಿಯಲ್ಲಿ ವರುಣನ ಆರ್ಭಟ : ಕಾರು ಮುಳುಗಿ ಯುವತಿ ಸಾವು, ನಾಲ್ವರ ರಕ್ಷಣೆ

- Advertisement -

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಸತತವಾಗಿ ಸುರಿಯುತ್ತಿರುವ ವರುಣನ ಆರ್ಭಟದಿಂದಾಗಿ (Heavy rainfall in Bengaluru) ಜನ ಹಾಗೂ ವಾಹನ ಸಂಚಾರಕ್ಕೆ ತೊಡಕಾಗಿದೆ. ಅದ್ರಲ್ಲೂ ಸಿಲಿಕಾನ್‌ ಸಿಟಿಯಲ್ಲಿ ಸತತವಾಗಿ ಸುರಿದ ಮಳೆಗೆ ಕಾರೊಂದು ಮುಳುಗಿದ ಪರಿಣಾಮವಾಗಿ, 22 ವರ್ಷದ ಯುವತಿ ಮೃತ ಪಟ್ಟಿದ್ದು, ಮತ್ತೆ ಉಳಿದ ನಾಲ್ವರನ್ನು ರಕ್ಷಣೆಪಡೆ ರಕ್ಷಿಸಿದೆ.

ಮೃತ ಯುವತಿಯನ್ನು ವಿಜಯವಾಡ ಮೂಲದ ಭಾನುರೇಖಾ ಎಂದು ಗುರುತಿಸಲಾಗಿದೆ. ಭಾರೀ ಮಳೆಗೆ ಬೆಂಗಳರಿನ ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ನಲ್ಲಿ ನೀರು ಶೇಖರಣೆಯಾಗಿದ್ದು, ಇದರಲ್ಲಿ ಕಾರು ಮುಳುಗಡೆಯಾಗಿದೆ. ಕಾರಿನಲ್ಲಿದ್ದ ಇತರರನ್ನು ರಕ್ಷಣೆ ಮಾಡಲಾಗಿದ್ದು, ಯುವತಿ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮೃತ ಯುವತಿ ಮನೆಯವರಿಗೆ ಸಂತಾಪವನ್ನು ಸೂಚಿಸಿದ್ದಾರೆ. ಉಳಿದ ನಾಲ್ವರ ಬಗ್ಗೆ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದರಿಂದ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ : ವಾಟ್ಸಾಪ್ ಸ್ಕ್ಯಾಮ್ ಹೆಚ್ಚಳ : ಸೈಬರ್ ವಂಚನೆ ತಪ್ಪಿಸಲು ಈ 5 ಅಂಶ ನೆನಪಿನಲ್ಲಿರಲಿ

ರಾಜ್ಯದ ಬೆಂಗಳೂರು, ಕರಾವಳಿ ಸೇರಿದಂತೆ ಹಲವು ಕಡೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ಬೆಂಗಳೂರಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮುಂದಿನ 5 ದಿನ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದೆರಡು ದಿನದಿಂದ ಕರಾವಳಿ ಭಾಗದಲ್ಲಿ ಸುಡು ಬಿಸಿಲಿನ ತಾಪಮಾನ ಏರಿಕೆ ಆಗಿದ್ದು, ವರುಣನ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ವರದಿಯ ಪ್ರಕಾರ, ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (Heavy rain in coastal) ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹವಾಮಾನ ಇಲಾಖೆ ಮುಂದಿನ 5 ದಿನಗಳವರೆಗೆ ಈ ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಸದ್ಯದಲ್ಲೇ ಮುಂಗಾರು ಮಳೆ ಆಗುವ ಸಮಯ ಸಮೀಪ ಇರುವುದರಿಂದ ರೈತರು ವ್ಯವಸಾಯದ ಕಡೆಗೆ ಮುಖ ಮಾಡಿದ್ದಾರೆ. ಹಾಗೆಯೇ ಗೆದ್ದೆ ಕೆಲಸ ಆರಂಭವಾಗುದ್ದರಿಂದ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಷ್ಟೇ ಅಲ್ಲದೇ ಈ ಬಾರೀ ರಾಜ್ಯದ ರಾಜಧಾನಿಯಲ್ಲಿ ವರುಣನ ಆರ್ಭಟ ತುಸು ಜೋರಾಗಿಯೇ ಇದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ 5 ದಿನಗಳ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ನಾಳೆ ಮಳೇಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮುಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡುಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ. ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಒಳನಾಡಿನ ಜಿಲ್ಲೆಗಳಿಗೆ ಕೊನೆಯ ಎರಡು ದಿನ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ. ಇದೇ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಯುವ ಮಾರುತಗಳು ಸಕ್ರಿಯವಾಗಲಿದೆ.

Heavy rainfall in Bengaluru: Varuna riot in the state capital: Young woman dies in car drowning, four rescued

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular