ಭಾನುವಾರ, ಮೇ 11, 2025
HomeCoastal NewsUdupi News : ಉಡುಪಿಯಲ್ಲಿ ಮೇ 29 ರಂದು ಮಿನಿ ಉದ್ಯೋಗ ಮೇಳ

Udupi News : ಉಡುಪಿಯಲ್ಲಿ ಮೇ 29 ರಂದು ಮಿನಿ ಉದ್ಯೋಗ ಮೇಳ

- Advertisement -

ಉಡುಪಿ ( Udupi News) : ಉದ್ಯೋಗಾಕಾಂಕ್ಷಿಗಳಿಗಾಗಿ ಉಡುಪಿ ಜಿಲ್ಲಾಡಳಿತದಲ್ಲಿ ಮಿನಿ ಉದ್ಯೋಗ ಮೇಳವನ್ನು ( job fair ) ಆಯೋಜಿಸಿದೆ. ಮಣಿಪಾಲದ ರಜತಾದ್ರಿಯ (Udupi dc Office Rajathadri) ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್ಎಸ್ಎಲ್ ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೈಂದೂರು: ಐ.ಟಿ.ಐ ಪ್ರವೇಶಾತಿ – ಅರ್ಜಿ ಆಹ್ವಾನ

ಉಡುಪಿ : ಬೈಂದೂರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ ಎಲೆಕ್ಟಿçÃಷಿಯನ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಹಾಗೂ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟಿçಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಮತ್ತು ಮೆಷಿನ್ ಎಲೆಕ್ಟಿçಕ್ ವೆಹಿಕಲ್ ಕೋರ್ಸ್‌ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ.

ಮಣಿಪಾಲ: ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂರವಾಣಿಗ ಸಂಖ್ಯೆ : 0820-2986145, ಮೊ.ನಂ. 9900329668, 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಕ್ಕರ್ಣೆ: ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ : ಕೊಕ್ಕರ್ಣೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಫಿಟ್ಟರ್ ಹಾಗೂ ಇಲೆಕ್ಟಿçಷಿಯನ್ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಪಿ.ಯು.ಸಿ ಅನುತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9483593148 ಮತ್ತು 8277558812 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಕ್ಕರ್ಣೆ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : Horoscope Today : ನಿತ್ಯಭವಿಷ್ಯ ಮೇ 26

ಮೇ 29 ರಂದು ಬೈಂದೂರಿನಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

ಉಡುಪಿ : ಮೆಸ್ಕಾಂ ಬೈಂದೂರು ಉಪವಿಭಾಗ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂ.ಸಂಖ್ಯೆ: 08254-252028 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ : ಕನಸಿನ ಕೂಸಿಗೆ ತನ್ನೂರಿನ ಹೆಸರಿಟ್ಟ ನಟ ರಿಷಬ್‌ ಶೆಟ್ಟಿ

udupi news job fair in Udupi dc Office Rajathadri May 29

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular