ಬ್ರಹ್ಮಾವರ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು ಉದ್ಯಮಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬಾರ್ಕೂರು ಚೌಳಿಕೆರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂದಾಪುರ ತಾಲೂಕಿನ ವಕ್ವಾಡಿಯ ಉದ್ಯಮಿ ಸಂತೋಷ್ ಶೆಟ್ಟಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಶ್ವೇತಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೋಟೇಶ್ವರದಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಪ್ಲೈವುಡ್ ಉದ್ಯಮ ನಡೆಸುತ್ತಿದ್ದ ಸಂತೋಷ್ ಶೆಟ್ಟಿ ಅವರು ತನ್ನ ಕಾರಿನಲ್ಲಿ ಬ್ರಹ್ಮಾವರದಿಂದ ವಕ್ವಾಡಿಯ ಕಡೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಕ್ರೆಟ್ಟಾ ಕಾರು ನಿಯಂತ್ರಣ ತಪ್ಪಿ ಚೌಳಿಕೆರೆ ತಿರುವಿನ ಬಳಿಯಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಕೂಡಲೇ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸುವುದಕ್ಕೆ ಮುಂದಾಗಿದ್ದಾರೆ.

ಈ ವೇಳೆಯಲ್ಲಿ ಕಾರು ಚಾಲನೆ ಮಾಡುತ್ತಿದ್ದ ಉದ್ಯಮಿ ಸಂತೋಷ್ ಶೆಟ್ಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ಶ್ವೇತಾ ಅವರನ್ನು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಟಯರ್ ಸ್ಪೋಟಗೊಂಡಿದ್ದೇ ಘಟನೆಗೆ ಕಾರಣವೆನ್ನಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಬ್ರಹ್ಮಾವರ ಠಾಣೆಯ ಪೊಲೀಸರು ತನಿಖೆ ನಡೆಯುತ್ತಿದ್ದಾರೆ.

ಕೆರೆಗೆ ತಡೆಗೋಡೆಯೇ ಇಲ್ಲಾ !
ಐತಿಹಾಸ ಪ್ರಸಿದ್ದ ಚೌಳಿಕೆರೆ ಪಾಳುಬಿದ್ದಿದೆ. ಚೌಳಿಕೆರೆ ಏರಿಯ ಮೇಲೆ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ಇದೇ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತಿವೆ. ಉಡುಪಿ, ಮಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೂ ಇದೇ ರಸ್ತೆ ಸಂಪರ್ಕವನ್ನು ಕಲ್ಪಿಸುತ್ತದೆ. ಆದರೆ ಕೆರೆಗೆ ಯಾವುದೇ ತಡೆಗೋಡೆಯನ್ನು ನಿರ್ಮಿಸಿಲ್ಲ. ಅಲ್ಲದೇ ಕರೆ ಪಕ್ಕದಲ್ಲಿರುವ ಅಪಾಯಕಾರಿ ತಿರುವು ಅಪಾಯವನ್ನು ಆಹ್ವಾನಿಸುತ್ತಲೇ ಇರುತ್ತದೆ. ಚಾಲಕರು ಸ್ವಲ್ಪ ಯಾಮಾರಿದ್ರೂ ವಾಹನಗಳು ಕೆರೆಗೆ ಬೀಳುತ್ತವೆ.

ಈ ಕುರಿತು ಸ್ಥಳೀಯರು ಈಗಾಗಲೇ ಗ್ರಾಮ ಪಂಚಾಯತ್ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಲಿಲ್ಲ. ಒಂದೊಮ್ಮೆ ತಡೆಗೋಡೆ ಇದ್ದದ್ರೆ ಅಪಘಾತ ಸಂಭವಿಸುತ್ತಲೇ ಇರಲಿಲ್ಲ ಅಂತಾ ಸ್ಥಳೀಯರು ಮಾತನಾಡುತ್ತಿದ್ದಾರೆ. ಇನ್ನಾದ್ರೂ ಜನಪ್ರತಿನಿಧಿಗಳು ಕೆರೆಗೆ ತಡೆಗೋಡೆ ನಿರ್ಮಿಸಬೇಕಾದ ಅಗತ್ಯವಿದೆ.


