ನವದೆಹಲಿ : ಲೋಕಸಭೆಯಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ನಿರ್ಮಲಾ ಸೀತಾರಾಮನ್ 2ನೇ ಬಾರಿಗೆ ಬಜೆಟ್ ಮಂಡಿಸೋ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಭಾರತದ ಸಂಸತ್ ನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಮೊದಲ ಮಹಿಳೆ ಅನ್ನೋ ಕೀರ್ತಿಗೆ ಪಾತ್ರರಾಗಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರು ಈ ಹಿಂದೆ ಬಜೆಟ್ ಮಂಡನೆ ಮಾಡಿದ್ದರು. ಆದರೆ ಅದು ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಿರಲಿಲ್ಲ. ಇಂದಿರಾ ಗಾಂಧಿಯ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆ ಅನ್ನೋ ಖ್ಯಾತಿಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದರು. ಇದೀಗ ಎರಡನೇ ಬಾರಿಗೆ ಪೂರ್ಣಾವಧಿಯ ಬಜೆಟ್ ಮಂಡಿಸೋ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ನಿರ್ಮಲಾ ಸೀತಾರಾಮನ್ ರಕ್ಷಣಾ ಸಚಿವೆಯಾಗಿ ಇದೀಗ ಹಣಕಾಸು ಸಚವರಾಗಿಯೂ ದೇಶದಲ್ಲಿ ಸಾಲು ಸಾಲು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ.
ಹೊಸ ಇತಿಹಾಸ ಸೃಷ್ಟಿಸಿದ ಸಚಿವೆ ನಿರ್ಮಲಾ ಸೀತಾರಾಮನ್ !
- Advertisement -