ಬೆಂಗಳೂರು: (Cheteshwar Pujara) ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಲ್ಲಿ ಅನುಭವಿ ಬ್ಯಾಟ್ಸ್’ಮನ್ ಚೇತೇಶ್ವರ್ ಪೂಜಾರ ಅವರನ್ನು ಕೈ ಬಿಡಲಾಗಿದೆ. ವಿಂಡೀಸ್ ಪ್ರವಾಸಕ್ಕೆ (India tour of West Indies) ಆಯ್ಕೆಯಾಗದಿರುವುದು ಪೂಜಾರ ಅವರ ಟೆಸ್ಟ್ ಕರಿಯರ್ ಅಂತ್ಯವಾಗುವ ಸೂಚನೆ ಎನ್ನಲಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಭಾರತ ತಂಡ ಡಿಸೆಂಬರ್’ವರೆಗೆ ಯಾವುದೇ ಟೆಸ್ಟ್ ಪಂದ್ಯಗಳನ್ನಾಡುತ್ತಿಲ್ಲ. ಡಿಸೆಂಬರ್’ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಮುಂದಿನ ಟೆಸ್ಟ್ ಸರಣಿಯನ್ನಾಡಲಿದೆ.
ಇತ್ತೀಚೆಗೆ ಇಂಗ್ಲೆಂಡ್’ನ ಲಂಡನ್’ನಲ್ಲಿರುವ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್ ಫೈನಲ್ ಪಂದ್ಯದ ವೈಫಲ್ಯದ ಹಿನ್ನೆಲೆಯಲ್ಲಿ ಚೇತೇಶ್ವರ್ ಪೂಜಾರ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ. ಆ ಪಂದ್ಯದಲ್ಲಿ 35 ವರ್ಷದ ಚೇತೇಶ್ವರ್ ಪೂಜಾರ ಕೇವಲ 41 ರನ್ (14, 27) ಗಳಿಸಲಷ್ಟೇ ಶಕ್ತರಾಗಿದ್ದರು. ಭಾರತ ಪರ 103 ಟೆಸ್ಟ್ ಪಂದ್ಯಗಳನ್ನಾಡಿರುವ ಚೇತೇಶ್ವರ್ ಪೂಜಾರ 43.60 ಸರಾಸರಿಯಲ್ಲಿ 19 ಶತಕ ಹಾಗೂ 35 ಅರ್ಧಶತಗಳ ನೆರವಿನಿಂದ 7195 ರನ್ ಕಲೆ ಹಾಕಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಚೇತೇಶ್ವರ್ ಪೂಜಾರ ಸ್ಥಾನದಲ್ಲಿ ಯುವ ಎಡಗೈ ಓಪನರ್ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆರಿಬಿಯನ್ ನಾಡಿನಲ್ಲಿ (India tour of West Indies) ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿಯನ್ನಾಡಲಿದ್ದು, ಪ್ರಥಮ ಟೆಸ್ಟ್ ಪಂದ್ಯ ಜುಲೈ 12ರಂದು ಡೊಮಿನಿಕಾದಲ್ಲಿರುವ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಆರಂಭವಾಗಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಕೆ.ಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜೈದೇವ್ ಉನಾದ್ಕಟ್, ನವದೀಪ್ ಸೈನಿ.
ಭಾರತದ ವೆಸ್ಟ್ ಇಂಡೀಸ್ ಪ್ರವಾಸದ ವೇಳಾಪಟ್ಟಿ (India tour of West Indies 2023 Fixtures)
ಟೆಸ್ಟ್ ಸರಣಿ:
ಪ್ರಥಮ ಟೆಸ್ಟ್: ಜುಲೈ12-16 (ವಿಂಡ್ಸರ್ ಪಾರ್ಕ್, ಡೊಮಿನಿಕಾ)
ದ್ವಿತೀಯ ಟೆಸ್ಟ್: ಜುಲೈ 20-24 (ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್)
ಏಕದಿನ ಸರಣಿ:
ಮೊದಲ ಏಕದಿನ: ಜುಲೈ 27 (ಕೆನ್ನಿಂಗ್ಟನ್ ಓವಲ್, ಬಾರ್ಬೆಡೋಸ್)
ಎರಡನೇ ಏಕದಿನ: ಜುಲೈ 29 (ಕೆನ್ನಿಂಗ್ಟನ್ ಓವಲ್, ಬಾರ್ಬೆಡೋಸ್)
ಮೂರನೇ ಏಕದಿನ: ಆಗಸ್ಟ್ 01 (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್)
ಇದನ್ನೂ ಓದಿ : Will Jacks : ಒಂದೇ ಓವರ್‌ನಲ್ಲಿ ಸತತ ಐದು ಸಿಕ್ಸರ್ ಬಾರಿಸಿದ ಆರ್‌ಸಿಬಿ ಆಟಗಾರ
ಟಿ20 ಸರಣಿ:
ಮೊದಲ ಟಿ20: ಆಗಸ್ಟ್ 04 (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್)
ಎರಡನೇ ಟಿ20: ಆಗಸ್ಟ್ 06 (ನ್ಯಾಷನಲ್ ಸ್ಟೇಡಿಯಂ, ಗಯಾನ)
ಮೂರನೇ ಟಿ20: ಆಗಸ್ಟ್ 08 (ನ್ಯಾಷನಲ್ ಸ್ಟೇಡಿಯಂ, ಗಯಾನ)
ನಾಲ್ಕನೇ ಟಿ20: ಆಗಸ್ಟ್ 12 (ಬ್ರೊವಾರ್ಡ್ ಕೌಂಟಿ ಸ್ಟೇಡಿಯಂ, ಲಾಡರ್’ಹಿಲ್; ಫ್ಲೋರಿಡಾ)
ಐದನೇ ಟಿ20: ಆಗಸ್ಟ್ 13 (ಬ್ರೊವಾರ್ಡ್ ಕೌಂಟಿ ಸ್ಟೇಡಿಯಂ, ಲಾಡರ್’ಹಿಲ್; ಫ್ಲೋರಿಡಾ)
Cheteshwar Pujara: BCCI Itishree for Cheteshwar Pujara’s test career.