ಮಂಗಳೂರು : Red Alert School Holiday : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಇನ್ನು ತಗ್ಗುಪ್ರದೇಶ, ಕೆರೆ, ನದಿತೀರ,ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯ ಬಾರದು. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು, ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. ನಿನ್ನೆಯಷ್ಟೇ ನಗರದ ಪಂಪ್‌ವೆಲ್, ಕೊಟ್ಟಚೌಕಿಯಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಇಂದು ಮಂಗಳೂರು ನಗರ, ಮೂಡಬಿದಿರೆ, ಮೂಲ್ಕಿ, ಉಳ್ಳಾಲ, ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಕಡಬ ತಾಲೂಕುಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡದೆ.
ಇದನ್ನೂ ಓದಿ : ಉಡುಪಿ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ : ಶಾಲೆಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ
