ಬುಧವಾರ, ಏಪ್ರಿಲ್ 30, 2025
HomeCinemaAura Movie : ಟ್ರೇಲರ್ ನಲ್ಲೇ ಮೋಡಿ ಮಾಡಿ ಹೊಸಬರ ಆರ ಸಿನಿಮಾ ಜುಲೈ 28ರಂದು...

Aura Movie : ಟ್ರೇಲರ್ ನಲ್ಲೇ ಮೋಡಿ ಮಾಡಿ ಹೊಸಬರ ಆರ ಸಿನಿಮಾ ಜುಲೈ 28ರಂದು ರಿಲೀಸ್

- Advertisement -

ಸ್ಯಾಂಡಲ್‌ವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸಬರ ಆರ ಸಿನಿಮಾದ (Aura Movie) ಟ್ರೇಲರ್ ರಿಲೀಸ್ ಆಗಿದ್ದು, ನೋಡುಗರ ಗಮನಸೆಳೆಯುತ್ತಿದೆ. ಸಸ್ಪೆನ್ಸ್, ಪಯಣ, ಪ್ರೀತಿ, ದುಷ್ಟ ಶಕ್ತಿ, ದೈವ ಸಂಘರ್ಷದ ಕಥಾಹಂದರ ಒಳಗೊಂಡಿರುವ ಸ್ಪಿರಿಚುಯಲ್ ಡ್ರಾಮಾ ಮತ್ತು ಥ್ರಿಲ್ಲರ್ ಜಾನರ್ ಸಿನಿಮಾ ‘ಆರ’. ಈ ಸಿನಿಮಾವನ್ನು ಅಶ್ವಿನ್ ವಿಜಯಮೂರ್ತಿ ನಿರ್ದೇಶಿಸಿದ್ದಾರೆ.

ಸಿನಿಮಾ, ಸಂಪೂರ್ಣ ಹೊಸ ಪ್ರತಿಭೆಗಳಿಂದ, ಹೊಸತನದಿಂದ ಕೂಡಿದೆ. ರೋಹಿತ್ ಹಾಗೂ ದೀಪಿಕಾ ಆರಾಧ್ಯ ‘ಆರ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಚಿತ್ರದ ನಾಯಕ ರೋಹಿತ್ ಬರೆದಿದ್ದು. ಆನಂದ್ ನೀನಾಸಂ ಸತ್ಯ ರಾಜ್ ನಿಖಿಲ್ ಶ್ರೀಪಾದ್ ಪ್ರತೀಕ್ ಲೋಕೇಶ್ ಹಾಗೂ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಿರ್ದೇಶಕ ಅಶ್ವಿನ್ ವಿಜಯಮೂರ್ತಿ ಮಾತನಾಡಿ, ಒಬ್ಬ ಹುಡುಗನ ಜರ್ನಿ ಕಥೆ ಇದು. ಆ ಜರ್ನಿಯಲ್ಲಿ ಅವನು ಆಧ್ಯಾತ್ಮಿಕವಾಗಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ. ಅದು ಯಾವುದೇ ಮುಖಾಂತರವಾಗಿಯಾದರು ಬರಬಹುದು. ಹೆಣ್ಣಿನ ಮೂಲಕವಾದರೂ ಬರಬಹುದು. ದುಡ್ಡಿನ ಮೂಲಕವಾದರು ಬರಬಹುದು. ಸಂಬಂಧಗಳ ಮೂಲಕವಾದರ ಬರಬಹುದು. ನಮ್ಮ ಜೀವನದಲ್ಲಿ ಯಾರೊಬ್ಬರಾದರೂ ಬಂದರು. ಅವರು ತೋರಿಸಿಕೊಳ್ಳಲು ಬರುತ್ತಾರೆ. ತಿಳಿಸಿಕೊಡಲು ಬರ್ತಾರೆ. ಈ ಸವಾಲುಗಳನ್ನು ಎದುರಿಸಿ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಾರಾ ಅನ್ನೋದು ಕಥೆ. ಇದನ್ನು ಕಮರ್ಷಿಯಲ್ ಆಗಿ ಆಧ್ಯಾತ್ಮಿಕವಾಗಿ ತೋರಿಸಲಾಗಿದೆ ಎಂದರು.

ಇದನ್ನೂ ಓದಿ : Let’s Get Married movie : ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಮಾಡಿದ ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ

ಇದನ್ನೂ ಓದಿ : Namratha Gowda : ಬಿಕಿನಿ ತೊಟ್ಟು ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡ ನಟಿ ನಮ್ರತಾ ಗೌಡ

‘ಆರ’ ಎಂಬ ಯುವಕನ ಸುತ್ತ ಹೆಣೆದ ಕಥೆಯಿದು. ವಿಧಿಯ ಜೊತೆ ಸೇರಿ ಸಂರಕ್ಷಣೆಗಾಗಿ ಹೋರಾಡುವ ಸ್ಟೋರಿ ಸಿನಿಮಾದಲ್ಲಿ ಇದೆ. ಸಿನಿಮಾದ ಬಹುತೇಕ ಚಿತ್ರೀಕರಣ ಉಡುಪಿಯಲ್ಲಿ ನಡೆದಿದೆ. ಸಿನಿಮಾದಲ್ಲಿ ಉಡುಪಿಯ ಕನ್ನಡವನ್ನು ಬಳಸಲಾಗಿದೆ. ಈ ಸಿನಿಮಾವನ್ನು ‘ಎಆರ್’ ಫಿಲ್ಮ್ಸ್‌ ಬ್ಯಾನರ್ ಅಡಿ ಸುಜಾತ ಚಡಗ, ಚಂದ್ರಶೇಖರ್ ಸಿ ಜಂಬಿಗಿ ನಿರ್ಮಾಣ ಮಾಡಿದ್ದಾರೆ. ಯುವ ಪ್ರತಿಭೆ ಶ್ರೀಹರಿ ಛಾಯಾಗ್ರಾಹಣ, ಗಿರೀಶ್ ಹೊತ್ತೂರ್ ಸಂಗೀತ ನಿರ್ದೇಶನ, ಮಾದೇಶ್ ಸಂಕಲನ, ದೇವಿ ಪ್ರಕಾಶ್ ಕಲಾ ನಿರ್ದೇಶನ ಈ ಸಿನಿಮಾಕ್ಕಿದೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಆರ ಇದೇ ಜುಲೈ 28ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲಿದೆ.

Aura Movie: Newcomer Aara movie that attracted the audience in the trailer will be released on July 28.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular