ಭಾನುವಾರ, ಏಪ್ರಿಲ್ 27, 2025
HomekarnatakaGruha Lakshmi Yojana : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ : ಯಾರು...

Gruha Lakshmi Yojana : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ : ಯಾರು ಅರ್ಹರು ? ಇಲ್ಲಿದೆ

- Advertisement -

ಬೆಂಗಳೂರು : Gruha Lakshmi Yojana : ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿಯನ್ನು ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 17 ಅಥವಾ 19 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್‌, ಗೃಹಲಕ್ಷ್ಮೀ ಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಆಗಸ್ಟ್‌ 16 ಅಥವಾ 17 ರಂದು ಯಜಮಾನಿ ಖಾತೆಗೆ ಎರಡು ಸಾವಿರ ರೂ. ಹಣ ಹಾಕುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲುಗಳು ಬೇಕು, ಹೇಗೆ ಅರ್ಜಿ ಸಲ್ಲಿಸಬಹುದು ಅನ್ನೋ ಮಾಹಿತಿ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಆಪ್‌ ಸಿದ್ದಪಡಿಸಿದೆ. ಗೃಹಜ್ಯೋತಿ ಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ನಿವಾರಣೆ ಮಾಡುವ ಸಲುವಾಗಿ ಇಲಾಖೆ ತಾಂತ್ರಿಕವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ. ಫಲಾನುಭವಿಗಳ ನೋಂದಣಿ ಜುಲೈ 17ಅಥವಾ 19 ರಿಂದ ಆರಂಭವಾಗಲಿದೆ.

ರೇಷನ್‌ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್‌ಎಂಎಸ್‌ ಮೂಲಕ ರವಾನೆ ಮಾಡಲಾಗುವುದು.ಮನೆಯ ಯಜಮಾನಿ 2000 ರೂಪಾಯಿ ಹಣವನ್ನು ಪಡೆಯುವ ಗೃಹಲಕ್ಷ್ಮೀ ಯೋಜನೆಗೆ ಗೂಗಲ್‌ ಪ್ಲೇ ಸ್ಟೋರ್‌, ಆಪಲ್‌ ಆಪ್‌ ಜೊತೆಗೆ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್‌ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿ ಅವಕಾಶ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ವಿವರ :

  • ಆಧಾರ್‌ ಕಾರ್ಡ್‌ ಸಂಖ್ಯೆ
  • ಬ್ಯಾಂಕ್‌ ಖಾತೆಯ ಪಾಸ್‌ಬುಕ್‌
  • ಬ್ಯಾಂಕ್‌ ಪಾಸ್‌ ಬುಕ್‌ಗೆ ಆಧಾರ್‌ ಲಿಂಕ್‌ ಆಗಿರಬೇಕು

ಇದನ್ನೂ ಓದಿ : NEET UG 2023 Counselling : ಕರ್ನಾಟಕ NEET UG 2023 ಕೌನ್ಸೆಲಿಂಗ್ ನೋಂದಣಿ ಪ್ರಾರಂಭ : ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : Namma Metro Bangalore : ಬೈಯಪ್ಪನಹಳ್ಳಿ-ಕೆಆರ್ ಪುರಂ ಮೆಟ್ರೋ : ಆಗಸ್ಟ್ 22 ರಿಂದ ಪ್ರಾಯೋಗಿಕ ಸಂಚಾರ ಆರಂಭ

ಬಿಪಿಎಲ್‌, ಎಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ನಲಿ ಮನೆಯೊಡತಿಯ ಹೆಸರು ಇರಲೇ ಬೇಕು. ಮನೆಯ ಯಜಮಾನಿಗೆ ಬ್ಯಾಂಕ್‌ ಖಾತೆಯ ಜೊತೆಗೆ ಮೊಬೈಲ್‌ ಸಂಖ್ಯೆ ಲಿಂಕ್‌ ಆಗಿರಬೇಕು. ಮನೆಯ ಯಜಮಾನಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಅಲ್ಲದೇ ಮನೆಯೊಡತಿಯ ಪತಿ ಜಿಎಸ್‌ಟಿ ಪಾವತಿದಾರರಾಗಿರಬಾರದು ಎಂಬ ನಿಯಮಗಳನ್ನು ಅಳವಡಿಸಲಾಗಿದೆ.

Gruha Lakshmi Yojana: When does application for Gruha Lakshmi Yojana start: Who is eligible? Here it is

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular