ಸೋಮವಾರ, ಏಪ್ರಿಲ್ 28, 2025
HomeCoastal NewsUdupi news : ಮೀನುಗಾರರಿಗೆ ಗುಡ್‌ ನ್ಯೂಸ್‌ : ಸಾಮೂಹಿಕ ಅಪಘಾತ ವಿಮಾ ಯೋಜನೆ ಘೋಷಿಸಿದ...

Udupi news : ಮೀನುಗಾರರಿಗೆ ಗುಡ್‌ ನ್ಯೂಸ್‌ : ಸಾಮೂಹಿಕ ಅಪಘಾತ ವಿಮಾ ಯೋಜನೆ ಘೋಷಿಸಿದ ಸರಕಾರ

- Advertisement -

ಉಡುಪಿ : Udupi news : ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಹೆಚ್ಚಿನವರ ಕೆಲಸವೆಂದರೆ ಮೀನುಗಾರಿಕೆ ಎಂದರೆ ತಪ್ಪಾಗಲ್ಲ. ತಮ್ಮ ಪ್ರಾಣವನ್ನು ಲೆಕ್ಕಿಸದೇ ಭೋರ್ಗರೆಯುವ ಕಡಲಿನಲ್ಲಿ ವರ್ಷ ಪೂರ್ತಿ ಮೀನುಗಾರಿಕೆಯಲ್ಲಿ ತೊಡಗಿರುತ್ತಾರೆ. ಮೀನುಗಾರಿಕೆಯಲ್ಲಿ ತೋಡಗಿರುವ ಸಂದರ್ಭದಲ್ಲಿ ಅವಘಡಗಳು ಸಂಭವಿಸಿ ಪ್ರಾಣ ಹಾನಿಯಾದರೆ ಅವರ ಕುಟುಂಬದವರಿಗೆ ಆರ್ಥಿಕ ನೆರವಾಗಲೆಂದು ಕೇಂದ್ರ ಸರಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷದೊಳಗಿನ ಮೀನುಗಾರರು, ಮೀನುಗಾರಿಕೆಯಲ್ಲಿ ಹಾಗೂ ಮೀನುಗಾರಿಕೆಗೆ ಪೂರಕವಾದ ಇತರೇ ಚಟುವಟಿಕೆಗಳಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಆಕಸ್ಮಿಕವಾಗಿ ಸಂಭವಿಸುವ ಅವಘಡಗಳಿಂದ ಜೀವ ಹಾನಿಯಾದಲ್ಲಿ ಅಂತಹ ಕುಟುಂಬದವರಿಗೆ ಪರಿಹಾರ ನೀಡಲು ಕೇಂದ್ರ ಸರಕಾರದ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ : Recruitment 2023 : ಉಡುಪಿ : ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Heavy Rainfall In Coastal : ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಮೀನುಗಾರಿಕೆ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ಮೀನುಗಾರರ ಹಾಗೂ ವಿಮೆ ಸೌಲಭ್ಯಕ್ಕಾಗಿ ನಾಮನಿರ್ದೇಶನ ಮಾಡುವ ಕುಟುಂಬ ಸದಸ್ಯರ ಪಾನ್ (ಪರ್ಮನೆಂಟ್ ಅಕೌಂಟ್ ನಂಬರ್) ಪ್ರತಿ ಹಾಗೂ ಇತರೆ ವಿವರಗಳನ್ನು ತಾವು ಸದಸ್ಯತ್ವ ಹೊಂದಿರುವ ಮೀನುಗಾರಿಕೆ ಸಹಕಾರಿ ಸಂಘಕ್ಕೆ ಜುಲೈ 28 ರ ಒಳಗೆ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Udupi news : Good news for fishermen : Government announced Group Accident Insurance Scheme

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular