ಉಡುಪಿ : ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯೆ ಖುಷ್ಭು ಸುಂದರ್, ಉಡುಪಿ ಕಾಲೇಜಿನ ಟಾಯ್ಲೆಟ್ ವಿಡಿಯೋ ಪ್ರಕರಣದ (Udupi College Toilet Video Case) ಕುರಿತು ಮಾತನಾಡಿದ ಅವರು, ಖಾಸಗಿ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿಲ್ಲ. ವಿದ್ಯಾರ್ಥಿಯ ಮೊಬೈಲ್ ಫೋನ್‌ನಲ್ಲಿ ಯಾವುದೇ ಫೋಟೋಗಳು ಅಥವಾ ವೀಡಿಯೊಗಳು ಕಂಡುಬಂದಿಲ್ಲ ಎಂದು ಹೇಳಿದರು.
ಅಂತರ್ಜಾಲದಲ್ಲಿ ನಕಲಿ ವಿಡಿಯೋಗಳು ಹರಿದಾಡುತ್ತಿವೆ. ಇಂತಹ ನಕಲಿ ವಿಡಿಯೋಗಳನ್ನು ಶೇರ್ ಮಾಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನು ಭೇಟಿ ಮಾಡುತ್ತೇವೆ. ನಕಲಿ ವಿಡಿಯೋಗಳು ಹರಿದಾಡುತ್ತಿವೆ. ವಿದ್ಯಾರ್ಥಿಯ ಮೊಬೈಲ್ ಫೋನ್‌ನಲ್ಲಿ ಯಾವುದೇ ಫೋಟೋಗಳು ಅಥವಾ ವೀಡಿಯೊಗಳು ಕಂಡುಬಂದಿಲ್ಲ. ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ನೀಡುವಂತೆ ಪೊಲೀಸರಿಗೆ ತಿಳಿಸಿದ್ದೇವೆ.
ಇದನ್ನೂ ಓದಿ : Accident News : ಕಾರು – ಬೈಕ್ ಢಿಕ್ಕಿ : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ನಾನು ಪಕ್ಷದ ಪರವಾಗಿ ಬಂದಿಲ್ಲ.
ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯೆ ಖುಷ್ಬು ಸುಂದರ್ ಮಾತನಾಡಿ, ರಾಜಕೀಯ ಪಕ್ಷಗಳಿಗೆ ಏನು ಬೇಕಾದರೂ ಹೇಳುವ ಸ್ವಾತಂತ್ರ್ಯವಿದೆ, ಪ್ರತಿಭಟಿಸುವ ಹಕ್ಕಿದೆ. ಆದರೆ ನಾನು ರಾಜಕೀಯ ಪಕ್ಷದ ಸದಸ್ಯನಾಗಿ ಬಂದಿಲ್ಲ. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ವಿರೋಧವಾಗಿ ಬಂದಿಲ್ಲ. ಈ ಸಂದರ್ಭದಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ದಾಖಲೆಗಳು ಮತ್ತು ಹೇಳಿಕೆಗಳು ಲಭ್ಯವಾದಾಗ ಮಾತ್ರ ತನಿಖೆ ಮುಂದುವರಿಯುತ್ತದೆ ಎಂದು ಹೇಳಿದರು.
Udupi College Toilet Video Case: Udupi College Toilet Camera Case: Khushbu Sundar Important Information