ಭಾನುವಾರ, ಮೇ 11, 2025
HomeCrimeBangalore Crime : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಬೆನ್ನಲೇ, ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ...

Bangalore Crime : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಬೆನ್ನಲೇ, ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ವರ್ತನೆ

- Advertisement -

ಬೆಂಗಳೂರು : Bangalore Crime : ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿನ ವಿಡಿಯೋ ಶೂಟಿಂಗ್‌ ಪ್ರಕರಣ ದೇಶದಾದ್ಯಂತ ಸದ್ದು ಮಾಡಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಶಾಲೆಯಲ್ಲಿನ ವಿದ್ಯಾರ್ಥಿಗಳೇ ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ಜೊತೆಗೆ ಅಶ್ಲೀಲವಾಗಿ ವರ್ತಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಬಸವವೇಶ್ವರನಗರದ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಂದ ಸಹ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿಯೇ ಕಿರುಕುಳ ನೀಡುತ್ತಿರುವ ಆರೋಪ ಬಯಲಿಗೆ ಬಂದಿದೆ. ಎಂಟನೇ ತರಗತಿಯಲ್ಲಿ ವಿದ್ಯಾರ್ಥಿಗಳು, ತಮ್ಮ ಸಹಪಾಠಿ ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ಪ್ರದರ್ಶನ ಮಾಡಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ಈ ಅಶ್ಲೀಲ ವರ್ತನೆ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ನೋವನ್ನು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : Soujanya murder case : ಸೌಜನ್ಯ ಕೊಲೆ ಪ್ರಕರಣ : ಭಕ್ತರು ಗೊಂದಲಕ್ಕೆ ಒಳಗಾಗದಂತೆ ಡಾ. ವೀರೇಂದ್ರ ಹೆಗ್ಗಡೆ ಮನವಿ

ಇದನ್ನೂ ಓದಿ : Nitin Desai dies : ಬಾಲಿವುಡ್‌ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ : ಸುಮಾರು 250 ಕೋಟಿ ರೂ. ಸಾಲ, ಆಡಿಯೋ ರೆಕಾರ್ಡಿಂಗ್ ಪತ್ತೆ

ವಿದ್ಯಾರ್ಥಿನಿಯೋರ್ವಳ ತಾಯಿ ಈ ವಿಚಾರವನ್ನು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಈ ವಿಚಾರದ ಕುರಿತು ನಿರ್ಲಕ್ಷ್ಯವಹಿಸಿದೆ. ಈ ಹಿನ್ನೆಲೆಯಲ್ಲೀಗ ಪೋಷಕರು ಬಸವೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Bangalore Crime: After Udupi College video case, obscene behavior by students in Bangalore school

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular