ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದಲೇ ವೀಕೆಂಡ್ ಲಾಕ್ ಡೌನ್ ಜಾರಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ 33 ಗಂಟೆಗಳ ಕಾಲ ಕರ್ನಾಟಕ ಬಂದ್ ಆಗಲಿದೆ. ಅನಗತ್ಯವಾಗಿ ಮನೆಯಿಂದ ಹೊರಬಂದ್ರೆ ಕೇಸ್ ಬೀಳುವುದು ಗ್ಯಾರಂಟಿ.

ರಾಜ್ಯ ಸರಕಾರ ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ನೈಟ್ ಕರ್ಪ್ಯೂ ಜಾರಿ ಮಾಡಿದೆ. ಅಲ್ಲದೇ ಇಂದಿನಿಂದ ವೀಕೆಂಡ್ ಲಾಕ್ ಡೌನ್ ಕೂಡ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ವರೆಗೆ ಕರ್ನಾಟಕ ಬಂದ್ ಆಗಲಿದೆ. ಮೆಡಿಕಲ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳು ಮಾತ್ರವೇ ಲಭ್ಯವಾಗಲಿದೆ. ಬಸ್, ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯುವುದಿಲ್ಲ.

ಲಾಕ್ ಡೌನ್ ವೇಳೆಯಲ್ಲಿ ಯಾರು ಕೂಡ ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ರಾಜ್ಯ ಸರಕಾರ ಸೂಚನೆಯನ್ನು ನೀಡಿದೆ.