ಶನಿವಾರ, ಮೇ 10, 2025
HomeCinemaBoys Hostel : ಹೊಸ ಟೈಟಲ್‌ನೊಂದಿಗೆ ತೆಲುಗುಗೆ ಡಬ್‌ ಆದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ

Boys Hostel : ಹೊಸ ಟೈಟಲ್‌ನೊಂದಿಗೆ ತೆಲುಗುಗೆ ಡಬ್‌ ಆದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ

- Advertisement -

ಸ್ಯಾಂಡಲ್‌ವುಡ್‌ಗೆ ಹೊಸ ಹುರುಪು ನೀಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ (Hostel hudugaru bekagiddare) ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಸಿನಿಮಾವನ್ನು ಬಾಯ್ಸ್ ಹಾಸ್ಟೆಲ್ (Boys Hostel) ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ. ಇದೇ ತಿಂಗಳ‌ 26ಕ್ಕೆ ಸಿನಿಮಾ ತೆಲುಗು ಪ್ರೇಕ್ಷಕರ ಎದುರು ಸಿನಿಮಾ ಹಾಜರಾಗಲಿದೆ.

ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಪ್ರಯತ್ನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಾಜ್ಯ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕಾಮಿಡಿ ಕ್ವಾಟ್ಲೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಟ್ಟಿತ್ತು. ಇದೀಗ ಆಂಧ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಬಾಯ್ಸ್ ಹಾಸ್ಟೆಲ್ ಟೈಲಟ್ ನಡಿ ತೆಲುಗು ಭಾಷೆಗೆ ಡಬ್ ಆಗ್ತಿರೋದು ಖುಷಿ ವಿಚಾರ. ಇದನ್ನೂ ಓದಿ : Sridevi Birth Anniversary : ಬಾಲಿವುಡ್‌ ನಟಿ ಶ್ರೀದೇವಿಯ ಹುಟ್ಟುಹಬ್ಬ : ಸ್ಫೂರ್ತಿದಾಯಕ ಪಯಣವನ್ನು ಸ್ಮರಿಸಿದ ಗೂಗಲ್ ಡೂಡಲ್

ಚಾಯ್ ಬಿಸ್ಕೆಟ್ ಫಿಲ್ಮ್ಸ್ ಮತ್ತು ಅನ್ನಪೂರ್ಣ ಸ್ಟುಡಿಯೋಸ್ ಜಂಟಿಯಾಗಿ ತೆಲುಗಿನಲ್ಲಿ “ಬಾಯ್ಸ್ ಹಾಸ್ಟೆಲ್” ಶೀರ್ಷಿಕೆಯಲ್ಲಿ ಈ ಸಿನಿಮಾವನ್ನು ಆಗಸ್ಟ್ 26ರಂದು ಬಿಡುಗಡೆ ಮಾಡುತ್ತಿವೆ. ಕನ್ನಡದಲ್ಲಿ ಈ ಸಿನಿಮಾವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪರವಃ ಪಿಕ್ಚರ್ಸ್ ಬ್ಯಾನರ್‌ ಅಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದಾರೆ. ಗುಲ್ಮೊಹರ್ ಫಿಲ್ಮ್ಸ್ ಮತ್ತು ವರುಣ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಈ ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

Boys Hostel : Hostel hudugaru bekagiddare movie dubbed in telugu with new title

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular