Tagaru Palya : ಬಡವ ರಾಸ್ಕಲ್, ಇಕ್ಕಟ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಟಗರು ಪಲ್ಯ ಸಿನಿಮಾ ತಂಡ ಸ್ಪೆಷಲ್ ಗಿಫ್ಟ್ ಕೊಟ್ಟಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಸಿನಿಮಾದ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ.

ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಹಾಡಿಗೆ ಕಂಠ ಕುಣಿಸಿದ್ದಾರೆ. ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇದನ್ನೂ ಓದಿ : Real Star Upendra : ರಿಯಲ್ ಸ್ಟಾರ್ ಉಪೇಂದ್ರಗೆ ಬಿಗ್ ರಿಲೀಫ್ : ಎಫ್ಐಆರ್ ದಾಖಲಿಸಲು ಹೈಕೋರ್ಟ್ ತಡೆ

ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ನಟಿ ತಾರಾ, ನಟ ಶರತ್ ಲೋಹಿತಾಶ್ವ, ರಂಗಾಯಣ ರಘು ಅಲ್ಲದೇ ಹಲವು ನಟ, ನಟಿಯರು ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ. “ಟಗರು ಪಲ್ಯ” (Tagaru Palya) ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಟೈಟಲ್ ಟ್ರ್ಯಾಕ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ. ಇದನ್ನೂ ಓದಿ : Raghavendra Rajkumar Birthday : ರಾಘವೇಂದ್ರ ರಾಜ್‌ಕುಮಾರ್ ಹುಟ್ಟುಹಬ್ಬ : ತಮ್ಮ ರಾಘುಗೆ ಭಾವನ್ಮಾಕವಾಗಿ ಶುಭಾಶಯ ಕೋರಿದ ಶಿವಣ್ಣ