ಸೋಮವಾರ, ಏಪ್ರಿಲ್ 28, 2025
HomeNationalUttarakhand Himachal : ಉತ್ತರಾಖಂಡ- ಹಿಮಾಚಲದಲ್ಲಿ ಮಳೆಯ ಆರ್ಭಟಕ್ಕೆ 81 ಮಂದಿ ಸಾವು

Uttarakhand Himachal : ಉತ್ತರಾಖಂಡ- ಹಿಮಾಚಲದಲ್ಲಿ ಮಳೆಯ ಆರ್ಭಟಕ್ಕೆ 81 ಮಂದಿ ಸಾವು

- Advertisement -

ನವದೆಹಲಿ : Uttarakhand Himachal : Uttarakhand Himachalಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ಮತ್ತು ಭೂಕುಸಿತದಿಂದಾಗಿ ಕನಿಷ್ಠ 81 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆ ಕುಸಿತದಿಂದ ದೇಹಗಳನ್ನು ಹೊರತೆಗೆಯಲು ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ಕಲವು ದಿನಗಳ ಕಾಲ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ 71 ಮಂದಿ ಬಲಿ

ಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದ್ದು, ಹೆಚ್ಚಿನ ಮೃತದೇಹಗಳು ಪತ್ತೆಯಾಗಿವೆ. ಕಳೆದ 3 ದಿನಗಳ ಅವಧಿಯಲ್ಲಿ ಕನಿಷ್ಠ 71 ಮಂದಿ ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ. ಇದುವರೆಗೆ ಒಟ್ಟು 57 ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ (ಕಂದಾಯ) ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಗುಡ್ಡಗಾಡು ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ, ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತವನ್ನು ಉಂಟುಮಾಡಿದೆ, ಅಲ್ಲಿ ಮೂರು ಪ್ರದೇಶಗಳು- ಸಮ್ಮರ್ ಹಿಲ್, ಫಾಗ್ಲಿ ಮತ್ತು ಕೃಷ್ಣ ನಗರವು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾಗಿದೆ. ರಾಜ್ಯದಲ್ಲಿ ತುರ್ತು ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ 24 ರಂದು ಮುಂಗಾರು ಮಳೆ ಆರಂಭವಾದ ದಿನದಿಂದ ಇದುವರೆಗೆ ಒಟ್ಟು ಮಳೆಗೆ ಸಂಬಂಧಿದ ಪ್ರಕರಣಗಳಲ್ಲಿ ಒಟ್ಟು 214 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 38 ಮಂದಿ ನಾಪತ್ತೆಯಾಗಿದ್ದಾರೆ. ಜೊತೆಗೆ ಕೃಷ್ಣ ನಗರ ಮತ್ತು ಸಮ್ಮರ್‌ ಹಿಲ್‌ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಶಿಮ್ಲಾ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದುವರೆಗೆ ಸಮ್ಮರ್ ಹಿಲ್‌ನಿಂದ 13, ಫಾಗ್ಲಿಯಿಂದ ಐದು ಮತ್ತು ಕೃಷ್ಣನಗರದಿಂದ ಎರಡು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಸಮ್ಮರ್ ಹಿಲ್‌ನಲ್ಲಿ ಕುಸಿದು ಬಿದ್ದಿರುವ ಶಿವ ದೇವಾಲಯದ ಅವಶೇಷಗಳಲ್ಲಿ ಕೆಲವು ಮೃತದೇಹಗಳು ಹೂತು ಹೋಗಿದ್ದು, ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂ ಕುಸಿತದ ಭೀತಿ ಉಂಟಾಗಿದೆ. ಕೃಷ್ಣ ನಗರದಲ್ಲಿ ಇರುವ ಸುಮಾರು 15 ಮನೆ ಹಾಗೂ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ :
Cape Verde : ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ದುರಂತ : 60 ಕ್ಕೂ ಹೆಚ್ಚು ಮಂದಿ ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ಕಾಂಗ್ರಾ ಜಿಲ್ಲೆಯ ಇಂದೋರಾ ಮತ್ತು ಫತೇಪುರ್ ಉಪವಿಭಾಗಗಳ ಪ್ರವಾಹ ಪೀಡಿತ ಪ್ರದೇಶಗಳಿಂದ ಒಟ್ಟು 1,731 ಜನರ ರಕ್ಷಣೆ ಮಾಡಲಾಗಿದೆ. ವಾಯುಪಡೆಯ ಹೆಲಿಕಾಫ್ಟರ್‌, ಸೇನಾ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್‌ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿಪುನ್ ಜಿಂದಾಲ್ ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಳೆದ 54 ದಿನಗಳ ಅವಧಿಯಲ್ಲಿ ಬರೋಬ್ಬರಿ 742 ಮಿಮೀ ಮಳೆ ಸುರಿದಿದೆ. ಈ ವರ್ಷದ ಜೂನ್ 1 ಮತ್ತು ಸೆಪ್ಟೆಂಬರ್ 30 ರ ನಡುವಿನ ಅವಧಿಯಲ್ಲಿ ದಾಖಲೆಯ 730 ಮಿಮೀ ಮಳೆ ದಾಖಲಾಗಿದೆ. ಈ ವರ್ಷದ ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಮಳೆಯು ಕಳೆದ 50 ವರ್ಷಗಳಲ್ಲಿನ ದಾಖಲೆಯನ್ನು ಮುರಿದಿದೆ ಎಂದು ಶಿಮ್ಲಾ ಹವಾಮಾನ ಕೇಂದ್ರದ ನಿರ್ದೇಶಕ ಸುರೀಂದರ್ ಪಾಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : Shakti scheme : ರಾಜ್ಯದಲ್ಲಿ ಮುಂದಿನ 10 ವರ್ಷಗಳ ಕಾಲ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ : ಸಾರಿಗೆ ಸಚಿವ

ಇನ್ನು ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪಾಂಗ್ ಮತ್ತು ಭಾಕ್ರಾ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ನಂತರ ಹೋಶಿಯಾರ್‌ಪುರ, ಗುರುದಾಸ್‌ಪುರ ಮತ್ತು ರೂಪನಗರ ಜಿಲ್ಲೆಗಳ ಹಲವು ಪ್ರದೇಶಗಳು ಮುಳುಗಡೆಯಾಗಿದೆ. ರಾಜ್ಯ ಸರಕಾರ ಪ್ರವಾಹ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ 1,677 ಅಡಿ ಮತ್ತು 1,398 ಅಡಿಗಳಿವೆ ಎಂದು ಹೇಳಿದರು.

https://www.youtube.com/watch?v=in9ppqkr-ME&t=1s
Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular