ಏಷ್ಯಾಕಪ್ (Asia Cup 2023) ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ವಿಶ್ವಕಪ್ ಸರಣಿಗೂ ( World Cup 2023) ಮುನ್ನವೇ ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ( IND VS AUS ODI Series ) ಆಡಲಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Cricket australia ) ಈಗ ಸರಣಿಗಾಗಿ 18 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಗಾಯದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ದೂರ ಉಳಿದಿರುವ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಇದೀಗ ಭಾರತ ವಿರುದ್ದದ ಸರಣಿಗೆ ತಂಡವನ್ನು ಮುನ್ನೆಡೆಸಲಿದ್ದಾರೆ. ಪ್ರಸ್ತುತ ಏಷ್ಯಾ ಕಪ್ 2023 ರ ಫೈನಲ್ ಪಂದ್ಯವನ್ನು ಆಡುತ್ತಿರುವ ಟೀಮ್ ಇಂಡಿಯಾ, ನಂತರ ವಿಶ್ವಕಪ್ 2023 ಕ್ಕೂ ಮೊದಲು ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ODI ಸರಣಿಯನ್ನು ಆಡಲಿದೆ.

ಕ್ರಿಕೆಟ್ ಆಸ್ಟ್ರೇಲಿಯಾ ಇದೀಗ 18 ಸದಸ್ಯರ ತಂಡವನ್ನು ಸರಣಿಗೆ ಪ್ರಕಟಿಸಿದೆ. ನಾಯಕ ಪ್ಯಾಟ್ ಕಮಿನ್ಸ್ ಸೇರಿದಂತೆ ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್ ಕೂಡ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಸೇರ್ಪಡೆ ಆಗಿರುವುದು ಆಸ್ಟ್ರೇಲಿಯಾಕ್ಕೆ ಆನೆಬಲ ಬಂದಂತಾಗಿದೆ.
ಇದನ್ನೂ ಓದಿ : ಒಂದೇ ಓವರ್‌ನಲ್ಲಿ 4 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ : ಏಷ್ಯಾಕಪ್‌ನಲ್ಲಿ ಮೊಹಮ್ಮದ್ ಸಿರಾಜ್ ವಿಶಿಷ್ಟ ದಾಖಲೆ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡದಲ್ಲಿ ಅವಕಾಶ ಪಡೆದಿರುವ ಟೆಸ್ಟ್ ಸ್ಪೆಷಲಿಸ್ಟ್ ಮಾರ್ನಸ್ ಲ್ಯಾಬುಸ್ಚಾಗ್ನೆ ಕೂಡ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಪರ ಆಡಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ವೇಳೆ ಕೈಗೆ ಗಾಯ ಮಾಡಿಕೊಂಡಿದ್ದ ಎಡಗೈ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಟ್ರಾವಿಡ್ ಹೆಡ್ ಭಾರತದ ವಿರುದ್ದದ ಸರಣಿ ಮಾತ್ರವಲ್ಲದೇ ವಿಶ್ವಕಪ್ 2023ನ್ನೂ ಕೂಡ ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಟ್ರಾವಿಸ್ ಹೆಡ್ ಗಾಯಗೊಂಡಿರುವ ಕಾರಣ ಇದೀಗ ಮಾರ್ನಸ್ ಲ್ಯಾಬುಸ್ಚಾಗ್ನೆ ಭಾರತ ಪ್ರವಾಸಕ್ಕೆ ಆಯ್ಕೆಯಾಗಿದ್ದು, ವಿಶ್ವಕಪ್‌ನಲ್ಲಿಯೂ ಆಡಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಸಂಜು ಸ್ಯಾಮ್ಸನ್ ನಿವೃತ್ತಿ ! ವಿಶೇಷ ಪೋಟೋ ವೈರಲ್
ಏಷ್ಯಾಕಪ್‌ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್, ಕೆ.ಎಲ್.ರಾಹುಲ್, ಇಶಾನ್ ಕಿಶಾನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನು ಮೊಹಮ್ಮದ್ ಸೆಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಬೌಲಿಂಗ್‌ನಲ್ಲಿ ಎದುರಾಳಿಗಳನ್ನು ಕಟ್ಟಿಹಾಕಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಆಟ ಭಾರತ ತಂಡಕ್ಕೆ ಪ್ಲಸ್ ಪಾಯಿಂಟ್.
ಭಾರತ ವಿರುದ್ದದ ಸರಣಿಗೆ(IND Vs AUS ) ಆಸ್ಟ್ರೇಲಿಯಾ ತಂಡ :
ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್ಸ್ , ಆಡಮ್ ಝಂಪಾ.
ಭಾರತ vs ಆಸ್ಟ್ರೇಲಿಯಾ (IND Vs AUS ODI Series) ಏಕದಿನ ಸರಣಿ ವೇಳಾಪಟ್ಟಿ:
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಸೆಪ್ಟೆಂಬರ್ 22 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಎರಡನೇ ಪಂದ್ಯ ಸೆಪ್ಟೆಂಬರ್ 24 ರಂದು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೂರನೇ ಪಂದ್ಯ ಸೌರಾಷ್ಟ್ರದಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ.