ಉಡುಪಿ : ಲಾಕ್ ಡೌನ್, ಸೀಲ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಎಸ್ಎಸ್ಎಲ್ ಸಿ ಮೌಲ್ಯ ಮಾಪನ ಮಾಡುತ್ತಿದ್ದ ಶಿಕ್ಷಕರಿಗೆ ಉಡುಪಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ನೆರವಾಗಿದೆ. ಉಡುಪಿಯಿಂದ ಮಂಗಳೂರಿಗೆ ತೆರಳುವ ಸುಮಾರು 30ಕ್ಕೂ ಅಧಿಕ ಶಿಕ್ಷಕರಿಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಲಾಕ್ ಡೌನ್ ಆದೇಶ ಜಾರಿ ಮಾಡಿದ್ರೆ, ಉಡುಪಿ ಜಿಲ್ಲಾಡಳಿತ ಸೀಲ್ ಡೌನ್ ಜಾರಿ ಮಾಡಿದ್ದು ಬಸ್ ಸಂಚಾರವನ್ನು ನಿಷೇಧಿಸಿತ್ತು. ತುರ್ತು ಆರೋಗ್ಯ ಸಮಸ್ಯೆಯನ್ನು ಹೊರತು ಪಡಿಸಿ ಉಳಿದ ಯಾರಿಗೂ ಕೂಡ ಜಿಲ್ಲೆಯೊಳಗೆ ಪ್ರವೇಶಿಸಲು ಹಾಗೂ ಜಿಲ್ಲೆಯಿಂದ ಹೊರ ಹೋಗಲು ಅವಕಾಶವನ್ನೇ ನೀಡುವುದಿಲ್ಲಾ ಎಂದು ಉಡುಪಿ ಜಿಲ್ಲಾಡಳಿತ ಹೇಳಿತ್ತು.

ಈ ಹಿನ್ನೆಲೆಯಲ್ಲಿ ಉಡುಪಿಯಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಉಡುಪಿಗೆ ಮೌಲ್ಯ ಮಾಪನಕ್ಕೆ ತೆರಳುತ್ತಿದ್ದ ಶಿಕ್ಷಕರಿಗೆ ಸಮಸ್ಯೆ ಎದುರಾಗಿತ್ತು. ಈ ಕುರಿತು ನಿಮ್ಮ newsnext ವಿಸ್ತ್ರತವಾದ ವರದಿ ಪ್ರಕಟಿಸಿತ್ತು.

ವರದಿಯ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದು, ಮೌಲ್ಯ ಮಾಪಕರು ಮೌಲ್ಯಮಾಪನ ಕೇಂದ್ರಗಳಿಗೆ ತೆರಳಿದ್ದಾರೆ.