SBI Recruitment 2023 : ಭಾರತ ಸರಕಾರ ಅಗ್ರಗಣ್ಯ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( State Bank of india) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 8773 ಕ್ಲರಿಕಲ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಕಾರ್ಯವನ್ನು ಆರಂಭಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಾರ್ಷಿಕವಾಗಿ ನೇಮಕಾತಿಗಳನ್ನು ನಡೆಸುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುತ್ತಿರುವವರಿಗೆ ಇದು ಸುವರ್ಣಾವಕಾಶ. ಅದ್ರಲ್ಲೂ ಪದವಿ ಶಿಕ್ಷಣ ಪೂರೈಸಿ ಸರಕಾರಿ ಉದ್ಯೋಗ ಹೊಂದ ಬೇಕು ಅನ್ನೋ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಹಾಗು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿ ಅರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕರೆದಿರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣ ಅಥವಾ ಕೇಮದ್ರ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : 10ನೇ ತರಗತಿ ಪಾಸ್ ಆಗಿದ್ದೀರೇ..? ಹಾಗಿದ್ದರೆ ನಿಮಗಾಗಿ ಕಾದಿದೆ ಕೇಂದ್ರ ಸರಕಾರಿ ಕೆಲಸ
ವಯೋಮಿತಿ :
ಎಸ್‌ಬಿಐ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ನಿಗದಿ ಪಡಿಸಲಾಗಿದೆ. ವಯೋಮಿತಿ 20 ರಿಂದ 28 ವರ್ಷ ವಯಸ್ಸಿನವರು ಅರ್ಜಿಯನ್ನು ಸಲ್ಲಿಸಬೇಕು. ಆದರೆ ಅಭ್ಯರ್ಥಿಗಳಿಗೆ ರಾಜ್ಯದ ಸ್ಥಳೀಯ ಭಾಷೆಯ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ನೆನಪಿಡಬೇಕಾದ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : ನವೆಂಬರ್ 17, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 7, 2023
ಪೂರ್ವಭಾವಿ ಪರೀಕ್ಷೆ: ಜನವರಿ 2024
ಮುಖ್ಯ ಪರೀಕ್ಷೆ: ಫೆಬ್ರವರಿ 2024

ಇದನ್ನೂ ಓದಿ : ಗೃಹಲಕ್ಷ್ಮೀ ಬೆನ್ನಲ್ಲೇ, ಗೃಹಿಣಿಯರಿಗೆ ಉಚಿತವಾಗಿ ಸಿಗಲಿದೆ 50 ಸಾವಿರ ರೂ.
ಎಸ್‌ಬಿಐ ನೇಮಕಾತಿಗೆ ಅರ್ಜಿ ಸಲ್ಲಿಸಲು ಈ ಹಂತಗಳನ್ನು ಅನುಸರಿಸಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ತಾವು ಮನೆಯಲ್ಲಿಯೇ ಕುಳಿತು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಕೆಗೆ ಆವಕಾಶವಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ.
ಇದನ್ನೂ ಓದಿ : ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ನೇಮಕಾತಿ : 1720 ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಉಚಿತವಾಗಿದೆ. ಸಾಮಾನ್ಯ ಅಭ್ಯರ್ಥಿಗಳು, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ನಿಗದಿತ ಅವಧಿಯ ಒಳಗಾಗಿ ಪಾವತಿ ಮಾಡುವವರ ಅರ್ಜಿಗಳು ಮಾತ್ರವೇ ನೇಮಕಾತಿಗೆ ಮಾನ್ಯವಾಗಲಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯು ಎರಡು ಹಂತಗಳಲ್ಲಿ ನಡೆಯಲಿದೆ. ಪ್ರಾಥಮಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯನ್ನು ಒಳಗೊಂಡಿದೆ. ಮುಖ್ಯ ಪರೀಕ್ಷೆಗ ಹಾಜರಾಗಬೇಕಾದ್ರೆ ಕಡ್ಡಾಯವಾಗಿ ಪ್ರಾಥಮಿಕ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದುಕೊಂಡಿರ ಬೇಕು. ಮುಖ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆಯುವ ಅಂಕಗಳ ಆಧಾರದಲ್ಲಿ ಆಯ್ಕೆಯನ್ನು ನಡೆಸಲಾಗುತ್ತದೆ.
SBI Recruitment 2023 : State Bank of India Recruitment 8,773 Posts : Click here to apply