ಮಂಗಳವಾರ, ಜೂನ್ 17, 2025
HomeBreakingಉಡುಪಿಯಲ್ಲಿಂದು 134 ಮಂದಿಗೆ ಕೊರೊನಾ ದೃಢ

ಉಡುಪಿಯಲ್ಲಿಂದು 134 ಮಂದಿಗೆ ಕೊರೊನಾ ದೃಢ

- Advertisement -

ಉಡುಪಿ : ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಉಡುಪಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,222ಕ್ಕೆ ಏರಿಕೆಯಾಗಿದೆ.

Alvas1

ಕಳೆದ 10 ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಒಟ್ಟು 134 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

Corona Treat

ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರಕರಣಗಳ ಪೈಕಿ ಬಹುತೇಕರಿಗೆ ಪ್ರಾಥಮಿಕ ಸಂಪರ್ಕದಿಂದಲೇ ಕೊರೊನಾ ಸೋಂಕು ಬಂದಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರಚೂಡ್ ತಿಳಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular