ಭಾನುವಾರ, ಏಪ್ರಿಲ್ 27, 2025
HomekarnatakaNPS to OPS Big Updates : ಹಳೆ ಪಿಂಚಣಿ ಯೋಜನೆ : ಸರಕಾರಿ ನೌಕರರಿಗೆ...

NPS to OPS Big Updates : ಹಳೆ ಪಿಂಚಣಿ ಯೋಜನೆ : ಸರಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಗುಡ್‌ನ್ಯೂಸ್‌

- Advertisement -

NPS to OPS Big Updates : ಕರ್ನಾಟಕ ಸರಕಾರ ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಆದರೆ 2006ರ ಮೊದಲು ನೇಮಕಾತಿ ಯಾಗಿರುವ ನೌಕರರಿಗೆ ಮಾತ್ರವೇ ಹಳೆ ಪಿಂಚಣಿ ಯೋಜನೆಗೆ ಒಳಪಟ್ಟಿದ್ದರು. ಆದ್ರೀಗ ಸರಕಾರಿ ನೌಕರರಿಗೆ ಗುಡ್‌ನ್ಯೂಸ್‌ ಕೊಡಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ.

Image Credit to Original Source
Image Credit to Original Source

ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಜಾರಿಗೆ ಹಲವು ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರನಾಳಿಕೆಯಲ್ಲಿ ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿ ಘೋಷಣೆಯನ್ನು ಮಾಡಿತ್ತು. ಆದ್ರೆ ಕಳೆದ ಒಂದು ತಿಂಗಳ ಹಿಂದೆಯಷ್ಟೇ ರಾಜ್ಯದಲ್ಲಿ ಸಂಪೂರ್ಣವಾಗಿ ಎನ್‌ಪಿಎಸ್‌ ರದ್ದು ಮಾಡಿಲ್ಲ.

Image Credit to Original Source
Image Credit to Original Source

ಕೇವಲ ೨೦೦೬ಕ್ಕಿಂತ ಮೊದಲು ನೇಮಕಾತಿ ಆಗಿರುವ ನೌಕರರಿಗೆ ಮಾತ್ರವೇ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೇರ್ಪಡೆ ಆಗಲು ಅವಕಾಶವನ್ನು ಕಲ್ಪಿಸಿತ್ತು. ಆದರೆ ಎನ್‌ಪಿಎಸ್‌ ನೌಕರರು ರಾಜ್ಯದಲ್ಲಿ ಸಂಪೂರ್ಣವಾಗಿ ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಆಗ್ರಹಿಸಿದ್ದರು. ಈ ನಡುವಲ್ಲೇ ಸಿಎಂ ಸಿದ್ದರಾಮಯ್ಯ ಎನ್‌ಪಿಎಸ್‌ ನೌಕರರಿಗೆ ಗುಡ್‌ನ್ಯೂಸ್‌ ಕೊಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ : ಗೃಹಿಣಿಯರಿಗೆ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌

ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಎನ್‌ಪಿಎಸ್‌ ನೌಕರರ ಜೊತೆಗೆ ಚರ್ಚಿಸಲು ಫೆಬ್ರವರಿ 28 ರಂದು ಸಿಎಂ ಸಿದ್ದರಾಮಯ್ಯ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಎನ್‌ಪಿಎಸ್‌ ನೌಕರರ ಬೇಡಿಕೆ, ಹಳೆ ಪಿಂಚಣಿ ಯೋಜನೆ ಜಾರಿಯಿಂದ ಆಗುವ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಲಿದೆ.

Image Credit to Original Source
Image Credit to Original Source

ಕೇವಲ ಸರಕಾರಿ ನೌಕರರು ಮಾತ್ರವಲ್ಲದೇ ಅನುದಾನಿತ ಶಾಲಾ ಶಿಕ್ಷಕರನ್ನು ಕೂಡ ಹಳೆ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಈ ಕುರಿತು ಕಳೆದ ಕೆಲವು ವರ್ಷಗಳಿಂದಲೂ ಶಿಕ್ಷಕರು ಹೋರಾಟವನ್ನು ನಡೆಸುತ್ತಲೇ ಇದ್ದಾರೆ. ಈ ಕುರಿತು ಕೂಡ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ : ರಾಜ್ಯ ಸರಕಾರಿ ನೌಕರರಿಗೆ 7ನೇ ವೇತನ ಜಾರಿ : ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷ ಪ್ರನಾಳಿಕೆಯಲ್ಲಿ ಎನ್‌ಪಿಎಸ್‌ ರದ್ದತಿ ಬಗ್ಗೆ ಘೋಷಣೆ ಮಾಡಿದೆ, ಆದರೆ ಇದುವರೆಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಕೊನೆಗೂ ರಾಜ್ಯದಲ್ಲಿ ಎನ್‌ಪಿಎಸ್‌ ರದ್ದಾಗಿ, ಹಳೆ ಪಿಂಚಣಿ ಯೋಜನೆ ಜಾರಿ ಆಗುತ್ತಾ ಅನ್ನೋದು ಸಭೆಯ ನಂತರವೇ ತಿಳಿಯಬೇಕಾಗಿದೆ.

ಇದನ್ನೂ ಓದಿ : ಉಡುಪಿ ಶ್ರೀಕೃಷ್ಣ ಮಠದ ಗೂಗಲ್‌ ಮ್ಯಾಪ್‌ ಲೋಕೇಶನ್‌ ಬದಲಾಯಿಸಿದ ಗೂಗಲ್‌ ಸಂಸ್ಥೆ

NPS to OPS Big Updates Good News for Karnataka Government employees

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular