ಉಡುಪಿ:ಕೊರೊನಾ ವೈರಸ್ ಸೋಂಕು ಇದೀಗ ಶ್ರೀಗಳಿಗೂ ತಟ್ಟಿದೆ. ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಶ್ರೀಗಳನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಶ್ರೀಗಳು ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.
ಶ್ರೀಗಳಿಗೆ ಕೊರೊನಾ ಸೋಂಕು ಹೇಗೆ ತಗುಲಿದೆ ಅನ್ನುವ ಕುರಿತು ಆರೋಗ್ಯಾಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸುಗುಣೇಂದ್ರ ತೀರ್ಥ ಶ್ರೀಪಾದರು ಶೀಘ್ರವಾಗಿ ಗುಣಮುಖರಾಗುವಂತೆ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.