ಬೆಂಗಳೂರು: ಅವರು ಕ್ರಿಕೆಟ್ ಮೈದಾನದ ಚಿರತೆ. ಕ್ರಿಕೆಟ್ ಅಂಗಣಕ್ಕಿಳಿದರೆ ಅವರು ಅಕ್ಷರಶಃ ಪಾದರಸ. ಅವರನ್ನು ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಕ್ಷೇತ್ರರಕ್ಷಕನೆಂದು ಕರೆಯಲಾಗುತ್ತದೆ. ಯಾರ ಬಗ್ಗೆ ಇಷ್ಟೆಲ್ಲಾ ಪೀಠಿಕೆ ಎಂಬುದು ನಿಮಗೆ ಈಗಾಗಲೇ ಅರ್ಥವಾಗಿರುತ್ತದೆ. ಯೆಸ್. ನಾವು ಹೇಳುತ್ತಿರುವುದು ಇದು ದಕ್ಷಿಣ ಆಫ್ರಿಕಾದ ಫೀಲ್ಡಿಂಗ್ ದಿಗ್ಗಜ ಜಾಂಟಿ ರೋಡ್ಸ್ (Jonty Rhodes) ಬಗ್ಗೆ. ಜಗದ್ವಿಖ್ಯಾತ ಕ್ಷೇತ್ರರಕ್ಷಕ ಜಾಂಟಿ ರೋಡ್ಸ್ ಭಾರತ ಕ್ರಿಕೆಟ್ ತಂಡದ ನೂತನ ಫಿಲ್ಡಿಂಗ್ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಜಾಂಟಿ ರೋಡ್ಸ್ ಅವರನ್ನು ಟೀಮ್ ಇಂಡಿಯಾ ಫೀಲ್ಡಿಂಗ್ ಹುದ್ದೆ ನೇಮಿಸಲು ಬಿಸಿಸಿಐ ಉತ್ಸುಕವಾಗಿದೆ ಎಂದು ತಿಳಿದು ಬಂದಿದೆ.

ಟಿ.ದಿಲೀಪ್ ಭಾರತ ತಂಡದ ಹಾಲಿ ಫೀಲ್ಡಿಂಗ್ ಆಗಿದ್ದಾರೆ. ಟೀಮ್ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್’ಗಳ ಕಾರ್ಯಾವಧಿ ಜೂನ್ 31ಕ್ಕೆ ಅಂತ್ಯಗೊಳ್ಳಲಿದೆ. ಐಸಿಸಿ ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಭಾರತ ತಂಡಕ್ಕೆ ಹೊಸ ಸಹಾಯಕ ಸಿಬ್ಬಂದಿಯ ನೇಮಕವಾಗಲಿದೆೆ.
ಇದನ್ನೂ ಓದಿ : Lockie Ferguson: 4 ಓವರ್, 4 ಮೇಡನ್; ಟಿ20 ವಿಶ್ವದಾಖಲೆ ದಾಖಲೆ ಬರೆದ RCB ಸ್ಟಾರ್!
ಟೀಮ್ ಇಂಡಿಯಾ ಮಾಜಿ ಓಪನರ್, ಐಪಿಎಲ್-2024 ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ, ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ (Gautam Gambhir) ಭಾರತ ಕ್ರಿಕೆಟ್ ತಂಡದ ನೂತನ ಹೆಡ್ ಕೋಚ್ (Team India Head Coach) ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಈ ಜೂನ್ ಅಂತ್ಯದ ವೇಳೆಗೆ ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ಗಂಭೀರ್ ಅವರ ಹೆಸರನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.

ಸ್ವತಃ ಗೌತಮ್ ಗಂಭೀರ್ ಕೂಡ ಭಾರತ ತಂಡದ ಕೋಚ್ ಆಗಲು ಉತ್ಸುಕರಾಗಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಕೆಲ ದಿನಗಳ ಹಿಂದೆ ಸುಳಿವು ಬಿಟ್ಟುಕೊಟ್ಟಿದ್ದರು. “ನಾನು ಭಾರತ ತಂಡಕ್ಕೆ ಕೋಚಿಂಗ್ ನೀಡುವುದನ್ನು ನಿಜಕ್ಕೂ ಇಷ್ಟ ಪಡುತ್ತೇನೆ. ರಾಷ್ಟ್ರೀಯ ತಂಡಕ್ಕೆ ಕೋಚ್ ಆಗುವುದಕ್ಕಿಂತ ದೊಡ್ಡ ಗೌರವ ಬೇರೊಂದಿಲ್ಲ” ಎಂದು ಅಬುಧಾಬಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೌತಮ್ ಗಂಭೀರ್ ಹೇಳಿದ್ದರು.
ಇದನ್ನೂ ಓದಿ : ಭಾರತದ ಅತ್ಯಂತ ಶ್ರೀಮಂತ ಸೆಲೆಬ್ರಿಟಿ ಪಟ್ಟಿ : ಬಾಲಿವುಡ್ ತಾರೆಗಳನ್ನೇ ಹಿಂದಿಕ್ಕಿದ ಕಿಂಗ್ ಕೊಹ್ಲಿ
ಗಂಭೀರ್ ಅವರ ಹೇಳಿಕೆಯನ್ನು ನೋಡಿದರೆ ಅವರೇ ಭಾರತ ತಂಡದ ನೂತನ ಕೋಚ್ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಏಕೈಕ ಅಭ್ಯರ್ಥಿ ಗೌತಮ್ ಗಂಭೀರ್ ಆಗಿದ್ದಾರೆ. ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿತ್ತು. ಭಾರತ ತಂಡದ ನೂತನ ಮುಖ್ಯ ಕೋಚ್ ಅವಧಿ ಮೂರೂವರೆ ವರ್ಷಗಳದ್ದಾಗಿರುತ್ತದೆ. 2024ರ ಜುಲೈ 1ಕ್ಕೆ ಆರಂಭವಾಗಿ 2027ರ ಡಿಸೆಂಬರ್ 31ಕ್ಕೆ ಕೋಚ್ ಹುದ್ದೆ ಅವಧಿ ಕೊನೆಗೊಳ್ಳಲಿದೆ. ಭಾರತ ಪುರುಷರ ತಂಡದ ಪರ್ಫಾಮೆನ್ಸ್ ಮತ್ತು ಮ್ಯಾನೇಜ್ಮೆಂಟ್ ಜವಾಬ್ದಾರಿ ಮುಖ್ಯ ತರಬೇತುದಾರನದ್ದಾಗಿರುತ್ತದೆ.
54 ವರ್ಷದ ಜಾಂಟಿ ರೋಡ್ಸ್ ಐಪಿಎಲ್’ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಫೀಲ್ಡಿಂಗ್ ಕೋಚ್ ಆಗಿದ್ದಾರೆ. ಗಂಭೀರ್ ಮತ್ತು ರೋಡ್ಸ್ ಲಕ್ನೋ ತಂಡದಲ್ಲಿ ಜೊತೆಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಈ ಜೋಡಿಯ ಜೊತೆಯಾಟ ಭಾರತ ತಂಡದಲ್ಲೂ ಮುಂದುವರಿಯಲಿದೆ ಎನ್ನಲಾಗುತ್ತಿದೆ.
Jonty Rhodes Indian Cricket Team fielding coach is a cricket leopard