Mangalore School Holiday : ಮಂ ಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನಾಳೆ (ಜುಲೈ 9) ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ಎಂದಿನಂತೆಯೇ ನಡೆಯಲಿದೆ. ಆದರೆ ಕಾಲೇಜುಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ, ನದಿ ಹಾಗೂ ಸಮುದ್ರ ತೀರದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ : HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು : ಸರಕಾರದಿಂದ ನ್ಯಾಯಾಲಯಕ್ಕೆ ಮಹತ್ವದ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ಸುಳ್ಯ, ಪುತ್ತೂರು, ಬಂಟ್ವಾಳ, ಕಡಬ ತಾಲೂಕುಗಳಲ್ಲಿ ಬಾರೀ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ತಹಶೀಲ್ದಾರರು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದರು. ಇದೀಗ ಜಿಲ್ಲಾಡಳಿತ ನಾಳೆ ಜಿಲ್ಲೆಯಾದ್ಯಂತ ರಜೆ ಘೋಷಿಸಿದೆ.

ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
ಉಡುಪಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜುಲೈ ೯ರಂದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ, ಹೆಬ್ರಿ, ಬೈಂದೂರು, ಕಾಪು, ಬ್ರಹ್ಮಾವರ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಇದನ್ನೂ ಓದಿ : ಕರಾವಳಿಯಲ್ಲಿ ಬಾರೀ ಮಳೆ ರೆಡ್ ಅಲರ್ಟ್ ಘೋಷಣೆ: ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ ನಗರದಲ್ಲಿನ ಬಹುತೇಕ ಪ್ರದೇಶಗಳಿಗೆ ನದಿಯ ನೀರು ನುಗ್ಗಿದ್ದು ನೆರೆ ಹಾವಳಿ ಆವರಿಸಿದೆ. ರಕ್ಷಣಾ ಪಡೆಗಳು ಈ ಸ್ಥಳಗಳಲ್ಲಿ ನಿರಂತರವಾಗಿ ಕಾರ್ಯಾಚರಣೆಯನ್ನು ನಡೆಸುತ್ತಿದೆ. ನಾಳೆಯೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಮಳೆಯ ಆರ್ಭಟ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಾಜಿ ಸಚಿವ ಬಿ.ಸಿ. ಪಾಟೀಲ್ ಆಳಿಯನ ಸಾವಿನ ಹಿಂದಿದೆ ನಿಗೂಢ ಕಾರಣ ..
Mangalore School Holiday Heavy Rain Declared Red Alert