BPL Ration Card : ಬೆಂಗಳೂರು : ಕರ್ನಾಟಕ ಸರಕಾರ ಬರೋಬ್ಬರಿ ಒಂದು ವರ್ಷದ ಬಳಿಕ ಬಿಪಿಎಲ್ ಕಾರ್ಡ್ ಇಲ್ಲದ ಇರುವವರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಇಂದಿನಿಂದಲೇ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅನುಮತಿಯನ್ನು ನೀಡಿದೆ.
ಕರ್ನಾಟಕ ಸರಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಇಲಾಖೆಯ ವೆಬ್‌ಸೈಟ್ ahara.kar.nic.in ನಲ್ಲಿ ಲಾಗಿನ್ ಆಗುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಿಪಿಎಲ್ ಕಾರ್ಡ್‌ಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಮನೆಯಲ್ಲಿಯೇ ಕುಳಿತು ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಿ :
ಬಿಪಿಎಲ್ ಕಾರ್ಡ್ ಪಡೆಯಲು ಇಚ್ಚಿಸುವವರು ಇಲಾಖೆಗೆ ಅಲೆಯುವ ಕಿರಿಕಿರಿ ಇನ್ನಿಲ್ಲ. ತಾವು ಮನೆಯಲ್ಲಿಯೇ ಕುಳಿತು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾಸಿಂಧು ಪೋರ್ಟಲ್ ಅನ್ನು ಬಳಸಿಕೊಂಡು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಮನೆಯಲ್ಲಿಯೇ ಕುಳಿತು ಯಾರು ಬೇಕಾದ್ರೂ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಮಹಿಳೆಯರಿಗೆ ಸಿಗಲಿದೆ 5000 ರೂ. ; ಹೊಸ ಯೋಜನೆ ಘೋಷಿಸಿದ ಪ್ರಧಾನ ನರೇಂದ್ರ ಮೋದಿ
ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ
ಕರ್ನಾಟಕ ಸರಕಾರ ಬರೋಬ್ಬರಿ ಒಂದು ವರ್ಷದ ಬಳಿಕ ಹೊಸದಾಗಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮಾತ್ರವಲ್ಲದೇ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕೂಡ ಅವಕಾಶವನ್ನು ಕಲ್ಪಿಸಿದೆ. ಸರಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿಸಲು ಕಾಯುತ್ತಿರುವವರಿಗೆ ಇದು ಸುವರ್ಣಾವಕಾಶ. ಸರಕಾರ ನೀಡಿರುವ ಅವಧಿಯಲ್ಲಿಯೇ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ : 3 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ನಿಮ್ಮ ಪಡಿತರ ಚೀಟಿ ಚಾಲ್ತಿಯಲ್ಲಿದ್ಯಾ ಚೆಕ್ ಮಾಡಿ
ಕೈಕೊಟ್ಟ ವೆಬ್‌ಸೈಟ್ ಜನರ ಹಿಡಿಶಾಪ
ಹೊಸದಾಗಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರಕಾರ ಅವಕಾಶ ಕಲ್ಪಿಸಿದ ಬೆನ್ನಲ್ಲೇ ಬೆಂಗಳೂರು ಒನ್ ಕೇಂದ್ರಕ್ಕೆ ಜನರು ಆಗಮಿಸುತ್ತಿದ್ದಾರೆ. ಆದರೆ ವೆಬ್‌ಸೈಟ್ ಓಪನ್ ಆಗದ ಇರುವ ಕಾರಣಕ್ಕೆ ರಾಜ್ಯ ಸರಕಾರಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಸರಕಾರಿ ಇಲಾಖೆಯ ಸರ್ವರ್‌ಗಳು ಪದೇ ಪದೇ ಕೈ ಕೊಡುತ್ತಾ ಇರುವುದರಿಂದ ಜನರು ಬೆಳಗಿನಿಂದ ಸಂಜೆಯ ವರೆಗೂ ರೇಷನ್ ಕಾರ್ಡ್ ತಿದ್ದುಪಡಿ ಕಾರ್ಯ, ಹೊಸದಾಗಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಕಾಯಬೇಕಾದ ಅನಿವಾರ್ಯತೆಯಿದೆ.
ಇದನ್ನೂ ಓದಿ : ಜೂನ್ ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ವಾ ? ಕಾರಣ ಇಲ್ಲಿದೆ ನೋಡಿ
ಈ ಹಿಂದೆಯೂ ಕೂಡ ರಾಜ್ಯ ಸರಕಾರ ಹಲವು ಬಾರಿ ಹೊಸದಾಗಿ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿಗೆ ಅವಕಾಶ ನೀಡಿದ್ದರೂ ಕೂಡ ವೆಬ್‌ಸೈಟ್ ಓಪನ್ ಆಗದ ಕಾರಣಕ್ಕೆ ಹಲವರು ಸೌಲಭ್ಯಗಳಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಅದೇ ಸಮಸ್ಯೆ ತಲೆದೋರಿರುವುದು ಜನರು ಸರಕಾರದ ವಿರುದ್ದ ಕೆರಳುವಂತೆ ಮಾಡಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ಎಚ್ಚೆತ್ತು, ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕಾಗಿದೆ.
Karnataka Government permission to Apply for New BPL Ration Card and Corrections Click here to apply at home