Schools, PU Colleges Holiday Announcement: ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ನಡುವಲ್ಲೇ ಮುಂಜಾಗೃತಾ ಕ್ರಮವಾಗಿ ಜುಲೈ 15 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಣೆ ಮಾಡಲಾಗಿದೆ. ಜುಲೈ ೧೫ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : 3 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ನಿಮ್ಮ ಪಡಿತರ ಚೀಟಿ ಚಾಲ್ತಿಯಲ್ಲಿದ್ಯಾ ಚೆಕ್ ಮಾಡಿ
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ತರಗತಿಗಳು ಎಂದಿನಂತೆಯೇ ನಡೆಯಲಿದೆ. ಆದರೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯ ಗೊಳಿಸುವಂತಿಲ್ಲ. ಅಲ್ಲದೇ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ತಲುಪುವಂತೆ ಆಯಾಯ ಕಾಲೇಜುಗಳು ಕ್ರಮವಹಿಸಬೇಕು.
ಇದನ್ನೂ ಓದಿ : Power Cut : ಮಂಗಳೂರು, ಉಡುಪಿಯಲ್ಲಿ ಜುಲೈ 14-16ರಂದು ಪವರ್ ಕಟ್ : ಯಾವ ದಿನ ಯಾವ ಪ್ರದೇಶದಲ್ಲಿ ವಿದ್ಯುತ್ ಇರಲ್ಲ, ಇಲ್ಲಿದೆ ಮಾಹಿತಿ
ಜಿಲ್ಲೆಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ನದಿ ಹಾಗೂ ಸಮುದ್ರ ತೀರದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ : ಜೂನ್ ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ವಾ ? ಕಾರಣ ಇಲ್ಲಿದೆ ನೋಡಿ
Dakshina Kannada District Schools, PU Colleges Holiday Announcement: Two Days Red Alert In Udupi, Dakshina Kannada District