India vs Sri Lanka series : ಬೆಂಗಳೂರು: ಶ್ರೀಲಂಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ (Surya Kumar Yadav) ಮತ್ತು ಏಕದಿನ ತಂಡದ ನಾಯಕನಾಗಿ ಟಿ20 ವಿಶ್ವ ಚಾಂಪಿಯನ್ ಕ್ಯಾಪ್ಟನ್ ರೋಹಿತ್ ಶರ್ಮಾ (Rohith Sharma) ನೇಮಕಗೊಂಡಿದ್ದಾರೆ.

ಕಳೆದ ಜನವರಿಯಲ್ಲಿ ಭಾರತ ಪರ ಕೊನೆಯ ಪಂದ್ಯವಾಡಿದ್ದ ಕನ್ನಡಿಗ ಕೆ.ಎಲ್ ರಾಹುಲ್ ಆರು ತಿಂಗಳ ನಂತರ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ. ಯುವ ಬಲಗೈ ಆರಂಭಿಕ ಬ್ಯಾಟ್ಸ್’ಮನ್ ಶುಭಮನ್ ಗಿಲ್ ಏಕದಿನ ಹಾಗೂ ಟಿ20 ತಂಡದ ಉಪನಾಯಕರಾಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ : ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಾ ? ಇನ್ನು ಮುಂದೆ ಕ್ರಿಕೆಟರ್ಸ್ ಈ ಕೆಲಸ ಮಾಡಲೇಬೇಕು
ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಂಡದ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕತ್ವದ ನಿರೀಕ್ಷೆಯಲ್ಲಿದ್ದರು. ಆದರೆ ಪಾಂಡ್ಯ ಅವರಿಂದ ಉಪನಾಯಕನ ಪಟ್ಟವನ್ನೂ ಕಿತ್ತುಕೊಂಡು ಕೇವಲ ಆಟಗಾರನಾಗಿ ತಂಡದಲ್ಲಿ ಮುಂದುವರಿಸಲಾಗಿದೆ.
ಇದೇ ತಿಂಗಳ ಕೊನೆಯ ವಾರದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ (India tour of Sri Lanka), ಸಿಂಹಳೀಯರ ವಿರುದ್ಧ 3 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ : Ishan Kishan: ಹುಟ್ಟುಹಬ್ಬದ ದಿನ ಸಮಾಧಿ ಮಂದಿರಕ್ಕೆ ತೆರಳಿದ ಇಶಾನ್ ಕಿಶನ್, ಒಲಿಯುತ್ತಾನಾ ಸಾಯಿ ಬಾಬಾ ?

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಇದನ್ನೂ ಓದಿ : Surya Kumar Yadav New T20 Captain : ಹಾರ್ದಿಕ್ ಪಾಂಡ್ಯಗೆ ಗಂಭೀರ್ ಶಾಕ್, ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕ
ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿ (India tour of Sri Lanka 2024)
ಜುಲೈ 27: ಮೊದಲ ಟಿ20 ಪಂದ್ಯ (ಪಲ್ಲಕೆಲೆ)
ಜುಲೈ 28: ಎರಡನೇ ಟಿ20 ಪಂದ್ಯ (ಪಲ್ಲಕೆಲೆ)
ಜುಲೈ 30: ಮೂರನೇ ಟಿ20 ಪಂದ್ಯ (ಪಲ್ಲಕೆಲೆ)
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ವೇಳಾಪಟ್ಟಿ
ಆಗಸ್ಟ್ 02: ಮೊದಲ ಏಕದಿನ ಪಂದ್ಯ (ಕೊಲಂಬೊ)
ಆಗಸ್ಟ್ 04: ಎರಡನೇ ಏಕದಿನ ಪಂದ್ಯ (ಕೊಲಂಬೊ)
ಆಗಸ್ಟ್ 07: ಮೂರನೇ ಏಕದಿನ ಪಂದ್ಯ (ಕೊಲಂಬೊ)
India vs Sri Lanka series Indian cricket team announced Surya Kumar Yadav as captain for t20 team