ಭಾನುವಾರ, ಏಪ್ರಿಲ್ 27, 2025
Homekarnatakaಉಡುಪಿ ಜಿಲ್ಲೆಯಾದ್ಯಂತ ನಾಳೆ (ಜುಲೈ 20) ಶಾಲೆಗಳಿಗೆ ರಜೆ ಘೋಷಣೆ : ಹಡವು ಪಡುಕೋಣೆಯಲ್ಲಿ ಮನೆ...

ಉಡುಪಿ ಜಿಲ್ಲೆಯಾದ್ಯಂತ ನಾಳೆ (ಜುಲೈ 20) ಶಾಲೆಗಳಿಗೆ ರಜೆ ಘೋಷಣೆ : ಹಡವು ಪಡುಕೋಣೆಯಲ್ಲಿ ಮನೆ ಮೇಲೆ ಬಿತ್ತು ಬೃಹತ್‌ ಮರ

- Advertisement -

Udupi School Holiday heavy rain : ಉಡುಪಿ/ ಬೈಂದೂರು : ಪುಷ್ಯಾ ಮಳೆ ಮೊದಲ ದಿನದಿಂದಲೇ ಆರಂಭಿಸೋದಕ್ಕೆ ಆರಂಭಿಸಿದೆ. ಇಂದು ನಾಳೆ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜುಲೈ 20 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆಯೂ ರೆಡ್‌ ಅಲರ್ಟ್‌ ಮುಂದುವರಿಕೆ ಆಗುವ ಹಿನ್ನೆಲೆಯಲ್ಲಿ ಎಲ್ಲರೂ ಕೂಡ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.

Udupi School Holiday heavy rain and wind, the boat overturned on Padukone and a huge wooden house
Image Credit to Original Source

ಇದನ್ನೂ ಓದಿ : ಹೊಸ ರೂಲ್ಸ್‌ : ಅತೀ ಹೆಚ್ಚು ಸಿಮ್‌ ಹೊಂದಿದ್ರೆ 3 ವರ್ಷ ಜೈಲು ಶಿಕ್ಷೆ, 2 ಲಕ್ಷ ದಂಡ

ಬೈಂದೂರು : ಹಡವು ಪಡುಕೋಣೆಯಲ್ಲಿ ಮನೆ ಮೇಲೆ ಉರುಳಿ ಬಿದ್ದ ಬೃಹತ್‌ ಮರ

ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಡ ಗ್ರಾಮದ ಹಡವು ಪಡುಕೋಣೆ ಎಂಬಲ್ಲಿ ಮನೆಯ ಮೇಲೆ ಬೃಹತ್‌ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮನೆ ಸಂಪೂರ್ಣವಾಗಿ ಜಖಂ ಆಗಿದೆ.

Udupi School Holiday heavy rain and wind, the boat overturned on Padukone and a huge wooden house
Image Credit to Original Source

ಬೈಂದೂರು ತಾಲೂಕಿನ ಹಡವು ಪಡುಕೋಣೆಯ ಚಿಕ್ಕು ದೇವಾಡಿಗ ಎಂಬವರ ಮನೆಯ ಮೇಲೆ ಇಂದು ಮಧ್ಯಾಹ್ನ ೨.೩೦ರ ಸುಮಾರಿಗೆ ಬೃಹತ್‌ ಗಾತ್ರದ ಅಶ್ವತ್ಥ ಮರ ಉರುಳಿ ಬಿದ್ದಿದೆ. ಮಧ್ಯಾಹ್ನದ ವೇಳೆಯಲ್ಲಿ ಬೀಸಿದ ಭಾರೀ ಗಾಳಿ, ಮಳೆಯಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮಧ್ಯಾಹ್ನದ ವೇಳೆಯಲ್ಲಿ ಮನೆಯಲ್ಲಿ ಜನರು ಇದ್ದಾಗಲೇ ಈ ಘಟನೆ ನಡೆದಿದೆ.

ಇದನ್ನೂ ಓದಿ : Suryakumar Yadav: ಸೂರ್ಯನಿಗೆ ಭಾರತ ತಂಡದ ನಾಯಕ ಪಟ್ಟ, ನಿಜವಾಯ್ತು ಕಾಪು ಮಾರಿಕಾಂಬ ಅರ್ಚಕರ ವಾಣಿ

Udupi School Holiday heavy rain and wind, the boat overturned on Padukone and a huge wooden house
Image Credit to Original Source

ಅಶ್ವತ್ಥ ಮರ ಮನೆ ಮೇಲೆ ಉರುಳಿ ಬೀಳುತ್ತಿದ್ದಂತೆಯೇ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಪ್ರಾಣಾಪಾಯ ತಪ್ಪಿದಂತಾಗಿದೆ. ಮನೆಯನ್ನು ಇತ್ತೀಚೆಗೆ ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ಬೃಹತ್‌ ಗಾತ್ರದ ಮರ ಉರುಳಿಬಿದ್ದ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಜಖಂ ಆಗಿದೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗುತ್ತಿದೆ.

Udupi School Holiday heavy rain and wind, the boat overturned on Padukone and a huge wooden house
Image Credit to Original Source

ಬೈಂದೂರು ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದಲೂ ವಿಪರೀತ ಮಳೆಯಾಗುತ್ತಿದೆ. ಇದೀಗ ಪುಷ್ಯಾ ಮಳೆಯು ಕೂಡ ಆರಂಭದ ದಿನವೇ ಆರಂಭಿಸೋದಕ್ಕೆ ಶುರು ಮಾಡಿದೆ. ಇಂದು ಮತ್ತು ನಾಳೆ ಉಡುಪಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿತ್ತು.

Udupi School Holiday heavy rain and wind, the boat overturned on Padukone and a huge wooden house

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular