Karkala Parashurama theme park Controversy : ಉಡುಪಿ : ಪರಶುರಾಮ ಥೀಮ್ ಪಾರ್ಕ್ ಕುರಿತು ಸಾಕಷ್ಟು ವಿವಾದಗಳು ಹುಟ್ಟಿಕೊಂಡಿದೆ. ಒಂದೆಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇತ್ತ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ವಿವಾದ ದೇಶದಾದ್ಯಂತ ಸದ್ದು ಮಾಡುತ್ತಿದೆ. ಪರಶುರಾಮನ ಮೂರ್ತಿ ಹಾಗೂ ಕಾಮಗಾರಿಗೆ ಸಂಬಂಧಿಸಿದಂತೆ ಅವ್ಯವಹಾರ ಆರೋಪ ಕೇಳಿಬಂದಿದ್ದು, ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ನೇತೃತ್ವದ ಆಯೋಗ ತನಿಖೆಯನ್ನು ನಡೆಸುತ್ತಿದೆ.
ಇದನ್ನೂ ಓದಿ : Union Budget 2024 : 1 ಲಕ್ಷ ವಿದ್ಯಾರ್ಥಿಗಳಿಗೆ ಸಿಗಲಿದೆ 10 ಲಕ್ಷ ರೂ. : ಮುದ್ರಾ ಸಾಲದ ಮೊತ್ತ 20 ಲಕ್ಷಕ್ಕೆ ಏರಿಕೆ
ಇನ್ನೊಂದೆಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೂಡ ಕಾಮಗಾರಿ ಪೂರ್ಣಗೊಳಿಸುವ ಕುರಿತು ನಿರ್ದೇಶನ ನೀಡಿತ್ತು. ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದು, ತನಿಖೆಗೆ ಪ್ರಭಾವ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ.

ಅರುಣ್ ಕುಮಾರ್ ಅವರು ಅಮಾನತು ಆದ ಬೆನ್ನಲ್ಲೇ ಉಡುಪಿ ನಿರ್ಮಿತಿ ಕೇಂದ್ರದ ಸಹಾಯ ಯೋಜನಾ ನಿರ್ದೇಶಕ ದಿವಾಕರ ಪಿ. ಅವರಿಗೆ ಯೋಜನಾ ನಿರ್ದೇಶಕರ ಹುದ್ದೆಗೆ ಹೆಚ್ಚುವರಿ ಪ್ರಭಾರಿ ಸ್ಥಾನವನ್ನು ನೀಡಿ ಆದೇಶಿಸಲಾಗಿದೆ. 11.50 ಕೋಟಿ ರೂಪಾಯಿ ವೆಚ್ಚದಲ್ಲಿ ಪರಶುರಾಮ ಥೀಮ್ ಪಾರ್ಕ್ ಆರಂಭಕ್ಕೆ ಸರಕಾರದ ಆಡಳಿತಾತ್ಮಕ ಮಂಜೂರಾತಿ ದೊರೆತಿತ್ತು.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ ಹಣ ಯಾವಾಗ ಬಿಡುಗಡೆ ಆಗುತ್ತೆ ? ಇಲ್ಲಿದೆ ಮಹತ್ವದ ಸುದ್ದಿ
ಅಲ್ಲದೇ ರಾಜ್ಯ ಸರಕಾರ 6.75 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿತ್ತು. ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ನಡೆದಿತ್ತು. ಆದರೆ ಆದರೆ ಕಾಮಗಾರಿಯಲ್ಲಿ ಅವ್ಯವಹಾರದ ಜೊತೆಗೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುವ ಕುರಿತು ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?
Karkala Parashurama theme park Controversy Nirmithi Center Director Arun Kumar Suspend Udupi dc Order