Udupi School Holiday : ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದು ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಕಾರ್ಕಳ, ಉಡುಪಿ, ಹೆಬ್ರಿ ಹಾಗೂ ಕಾಪು ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 31 ರಂದು ರಜೆಯನ್ನು ಘೋಷಣೆ ಮಾಡಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಉಡುಪಿ, ಹೆಬ್ರಿ, ಕಾರ್ಕಳ ಹಾಗೂ ಕಾಪು ತಹಶೀಲ್ದಾರರು ಈ ಆದೇಶ ಹೊರಡಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯ ಕುರಿತು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : Shiradi Ghat Landslide : ಶಿರಾಡಿ ಘಾಟ್ ಭೂಕುಸಿತದಲ್ಲಿ ಸಿಲುಕಿದ ಟ್ಯಾಂಕರ್ : ಬೆಂಗಳೂರು – ಮಂಗಳೂರು ಸಂಪರ್ಕ ಕಡಿತ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದಲೂ ಸುರಿಯುತ್ತಿರುವ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮಂಗಳೂರು, ಕಡಬ, ಮೂಡಬಿದಿರೆ ತಾಲೂಕುಗಳಲ್ಲಿ ಭಾರೀ ಮಳೆ ಸುರಿದಿದೆ.
ಇದನ್ನೂ ಓದಿ : ಕುಂದಾಪುರ ಚಿನ್ನ ಬೆಳ್ಳಿ ಕೆಲಸಗಾರರ ಸಂಘ : ಅಧ್ಯಕ್ಷರಾಗಿ ಕುಶಕುಮಾರ್ ಪದಗ್ರಹಣ
ಜಿಲ್ಲೆಯಾಧ್ಯಂತ ಇಂದೂ ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Udupi School Holiday in 4 Udupi Karkala hebri Kapu Taluk Heavy Rain Red Alert Declared