ಭಾನುವಾರ, ಏಪ್ರಿಲ್ 27, 2025
HomekarnatakaKundapura Kannada festival: ಬೆಂಗಳೂರಿನಲ್ಲಿ 2 ದಿನ ಕುಂದಾಪ್ರ ಕನ್ನಡ ಹಬ್ಬ

Kundapura Kannada festival: ಬೆಂಗಳೂರಿನಲ್ಲಿ 2 ದಿನ ಕುಂದಾಪ್ರ ಕನ್ನಡ ಹಬ್ಬ

- Advertisement -

Kundapura Kannada festival ಬೆಂಗಳೂರು : ಕುಂದಾಪ್ರ ಕನ್ನಡ ಪ್ರತಿಷ್ಠಾನದ ಆಯೋಜನೆಯಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಗಸ್ಟ್‌ 17 ಮತ್ತು 18ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕುಂದಾಪ್ರ ಕನ್ನಡ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡದ ಸೊಗಡು ಅನಾವರಣವಾಗಲಿದೆ.

Kundapura Kannada festival in Bangalore At August 17 18
Image Credit : Roopesh

ಕುಂದಾಪ್ರ ಪ್ರತಿಷ್ಠಾನ ಅಧ್ಯಕ್ಷ ಡಾ. ದೀಪಕ್‌ ಶೆಟ್ಟಿ ಬಾರಕೂರು ಅವರು ಬೆಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಅಗಸ್ಟ್‌ 17 ಮತ್ತು 18ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ. ಕಾಂತಾರ ಖ್ಯಾತಿಯ ನಟ- ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ನೆರವೇರಲಿದೆ.ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ಉದ್ಯಮಿ ಕೃಷ್ಣಮೂರ್ತಿ ಮಂಜ, ಚಿಕ್ಕಮಗಳೂರಿನ ಲೈಫ್‌ಲೈನ್ ಫೀಡ್ಸ್ ಪ್ರೈವೇಟ್‌ ಲಿಮಿಟೆಡ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಕಿಶೋರ್ ಕುಮಾರ್ ಹೆಗ್ಡೆ ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ಟೀಮ್‌ ಕುಂದಾಪುರಿಯನ್ಸ್‌ : ಸಿಲಿಕಾನ್‌ ಸಿಟಿಯಲ್ಲಿ ಮನಗೆದ್ದ ಆಸಾಡಿ ಹಬ್ಬ

ಭಾನುವಾರ ಸಂಜೆ 5ಕ್ಕೆ ಸಮಾರೋಪ ಸಮಾರಂಭ ನೆರವೇರಲಿದೆ. ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ನೆರವೇರಲಿದೆ. ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ,ಶಾಸಕ ಗುರುರಾಜ್ ಗಂಟಿಹೊಳೆ, Universal Group ಉಪೇಂದ್ರ ಶೆಟ್ಟಿ, MRG ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ,ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ ಉಪಸ್ಥಿತರಿಲಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ20 ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದು ! ಜಾರಿಯಾಯ್ತು ಹೊಸ ರೂಲ್ಸ್‌

ಕುಂದಾಪ್ರ ಕನ್ನಡ ಹಬ್ಬ ಎರಡು ದಿನಗಳ ಕಾಲ ನಡೆಯಲಿದ್ದು, ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಶನಿವಾರ ಮಧ್ಯಾಹ್ನ 2 ರಿಂದ ರಾತ್ರಿ 10.30ರ ವರೆಗೆ ಕಾರ್ಯಕ್ರಮಗಳು ನಡೆಯಲಿದ್ದು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರವಾಗಿ ಕಾರ್ಯಕ್ರಮಗಳು ನೆರವೇರಲಿದೆ. ಕುಂದಾಪ್ರ ಕನ್ನಡ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ದೀಪಕ್‌ ಶೆಟ್ಟಿ ತಿಳಿಸಿದ್ದಾರೆ.

Kirikku guru

ಕುಂದಾಪ್ರ ಕನ್ನಡ ಹಬಕ್ಕೆ ರಿಯಲ್‌ ಸ್ಟಾರ್‌ ಉಪೇಂಧ್ರ, ಖ್ಯಾತ ನಟಿ ಪ್ರಿಯಾಂಕ ಉಪೇಂದ್ರ, ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ನಟ- ನಿರ್ದೇಶಕ ರಾಜ್‌ ಬಿ. ಶೆಟ್ಟಿಅವರನ್ನು ಆಹ್ವಾನಿಸಲಾಗಿದೆ. ಕುಂದಾಪ್ರ ಕನ್ನಡ ಹಬ್ಬದಲ್ಲಿ ಕುಂದಾಪ್ರದ ಸಂಸ್ಕೃತಿಯನ್ನು ವಿಭಿನ್ನವಾಗಿ ಪ್ರಸ್ತುತಿ ಪಡಿಸಲಾಗುತ್ತಿದೆ. ಕರಾವಳಿಯ ಗಂಡುಕಲೆ ಯಕ್ಷಗಾನದ ಜೋಡಾಟ ಸಿಲಿಕಾನ್‌ ಸಿಟಿಯಲ್ಲಿ ನಡೆಯುತ್ತಿರುವುದು ಇದೇ ಮೊದಲು. ಒಂದೇ ಪ್ರಸಂಗಕ್ಕೆ ಎರಡು ರಂಗಸ್ಥಳದಲ್ಲಿ ಸ್ಪರ್ಧೆ ಏರ್ಪಡಲಿದೆ. ಇದೇ ಮೊದಲ ಬಾರಿಗೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್‌ ತಿಳಿಸಿದ್ದಾರೆ.

ಕುಂದಾಪ್ರ ಕನ್ನಡ ಹಬ್ಬದಲ್ಲಿ ವಿಶಿಷ್ಟವಾಗಿ ಕರಾವಳಿಯ ಖಾದ್ಯ ಮೇಳ ಇರಲಿದೆ. ವಿಶೇಷ ತಿಂಡಿ ತಿನಿಸುಗಳನ್ನು ತಿಂದು ಸಂಭ್ರಮಿಸಲು ಕೂಡ ಅವಕಾಶ ಕಲ್ಪಿಸಲಾಗಿದೆ. ಕುಂದಾಪ್ರ ಸಂತಿ ಹೆಸರಿನಲ್ಲಿ ಒಡವೆ, ವಸ್ತುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಕೂಡ ಅವಕಾಶ ಕಲ್ಪಿಸಲಾಗಿದೆ. ಗೌರವಾಧ್ಯಕ್ಷರಾದ ಉದಯ ಹೆಗ್ಡೆ, ಉಪಾಧ್ಯಕ್ಷರಾದ ನರಸಿಂಹ ಬೀಜಾಡಿ, ಕೋಶಾಧಿಕಾರಿಗಳಾದ ವಿಜಯ್ ಶೆಟ್ಟಿ ಹಾಲಾಡಿ, ಜೊತೆ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕರಾದ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕರಾದ ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.

Kundapura Kannada festival in Bangalore At August 17 18

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular