ಭಾನುವಾರ, ಏಪ್ರಿಲ್ 27, 2025
HomeNationalಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ : ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ : ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

- Advertisement -

ತಿರುವನಂತಪುರ: ಮುಂಬೈನಿಂದ ತಿರುವನಂತಪುರಕ್ಕೆ ತೆರಳಬೇಕಿದ್ದ ಏರ್‌ ಇಂಡಿಯಾದ (Air India) ವಿಮಾನದಲ್ಲಿ ಬಾಂಬ್‌ ಬೆದರಿಕೆ ಕೇಳಿ ಬಂದ ಹಿನ್ನೆಲೆಯಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣ (Thiruvananthapuram airport) ದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯನ್ನು ಆಧರಿಸಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Air India flight Bomb threat Emergency declared at Thiruvananthapuram airport
Image Credit to Original Source

ಮುಂಬೈನಿಂದ ಹೊರಟಿದ್ದ ವಿಮಾನ ಇನ್ನೇನು ತಿರುವನಂತಪುರ ವಿಮಾನ ನಿಲ್ದಾಣ ತಲುಪಬೇಕು ಅನ್ನೋ ಹೊತ್ತಲ್ಲೇ ಏರ್‌ ಇಂಡಿಯಾ ವಿಮಾನದ ಫೈಲೆಟ್‌ನಿಂದ ಬಾಂಬ್‌ ಬೆದರಿಕೆ ಇರುವ ಮಾಹಿತಿ ಲಭ್ಯವಾಗಿದೆ. ಏರ್‌ ಇಂಡಿಯಾದ AI 657 (BOM-TRV) ಆಗಸ್ಟ್ 22, 2024 ರಂದು 0730ಕ್ಕೆ ಈ ಘಟನೆ ನಡೆದಿದೆ. ಬಾಂಬ್‌ ಬೆದರಿಕೆ ಕೇಳಿ ಬಂದಿರುವ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದ್ದು, ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ : ರಂಜಿತ್‌ ಶಿರಿಯಾರ್‌ಗೆ ಸೌತ್ ಇಂಡಿಯಾ ಬೆಸ್ಟ್ ಆಂಕರ್ ಪ್ರಶಸ್ತಿ

ಏರ್‌ ಇಂಡಿಯಾ ವಿಮಾನದಲ್ಲಿ ಒಟ್ಟು 135 ಮಂದಿ ಪ್ರಯಾಣಿಸುತ್ತಿದ್ದರು ಆದರೆ ಎಲ್ಲಿಂದ ಈ ಬೆದರಿಕೆ ಬಂದಿದೆ ಅನ್ನೋ ಮಾಹಿತಿ ಇನ್ನೂ ಖಚಿತವಾಗಿಲ್ಲ. ವಿಮಾನವಾಗಿ ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಲಾಗಿದೆ. ಅಲ್ಲದೇ ಐಸೋಲೇಷನ್‌ ಬೇಸ್‌ನಲ್ಲಿ ಇರಿಸಿದ್ದು, ತೀವ್ರ ನಿಗಾ ವಹಿಸಲಾಗುತ್ತಿದೆ. ಅಲ್ಲದೇ ವಿಮಾನವನ್ನು ಬೇರೆಡೆಗೆ ಸ್ಥಳಾಂತರ ಮಾಡುವ ಕಾರ್ಯವೂ ನಡೆಸಲಾಗುತ್ತಿದೆ.

Air India flight Bomb threat Emergency declared at Thiruvananthapuram airport
Image Credit to Original Source

ಇದನ್ನೂ ಓದಿ : ಕೋಟ ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಸೇಫ್‌ ಆಗಿ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದಾರೆ. ಆದರೆ ಇತರ ವಿಮಾನಗಳ ಹಾರಾಟಕ್ಕೆ ಯಾವುದೇ ಅಡಚಣೆ ಉಂಟಾಗಿಲ್ಲ ಎಂದು ತಿರುವನಂತಪುರಂ ವಿಮಾನ ನಿಲ್ದಾಣದ ಮೂಲಗಳು ತಿಳಿಸಿದೆ. ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಇತರ ವಿಮಾನ ನಿಲ್ದಾಣಗಳಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್‌ ಆದೇಶ : ಕಾಂಗ್ರೆಸ್‌ಗೆ ತೀವ್ರ ಮುಖಭಂಗ

Air India flight Bomb threat : Emergency declared at Thiruvananthapuram airport

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular