ಭಾನುವಾರ, ಏಪ್ರಿಲ್ 27, 2025
Homeeducationಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಬಿಎಡ್‌ ಕಡ್ಡಾಯವಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಬಿಎಡ್‌ ಕಡ್ಡಾಯವಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Teachers Recruitment : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಮಹತ್ವದ ತೀರ್ಪು ನೀಡಿದೆ. ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಬೋಧಿಸಲು ಪ್ರಾಥಮಿಕ ಶಿಕ್ಷಕರಿಗೆ ಬಿಎಡ್‌ (Bed) ಅರ್ಹತೆ ಕಡ್ಡಾಯವಲ್ಲ ಎಂದಿದೆ.

- Advertisement -

Teachers Recruitment : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಮಹತ್ವದ ತೀರ್ಪು ನೀಡಿದೆ. ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಬೋಧಿಸಲು ಪ್ರಾಥಮಿಕ ಶಿಕ್ಷಕರಿಗೆ ಬಿಎಡ್‌ (Bed) ಅರ್ಹತೆ ಕಡ್ಡಾಯವಲ್ಲ ಎಂದಿದೆ. ಆದರೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ ಪದವಿ ಕಡ್ಡಾಯ ಎಂದು ಅಭಿಪ್ರಾಯಪಟ್ಟಿದೆ.

ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿಗೆ ನಿರ್ದಿಷ್ಟ ಮಾನದಂಡಗಳನ್ನು ನಿಗದಿ ಪಡಿಸಿದೆ. ಪದವಿ ಶಿಕ್ಷಣದ ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಬಿಎಡ್‌ ಪದವಿ ಪಡೆಯುವುದು ಕಡ್ಡಾಯವಾಗಿತ್ತು. ಆದರೆ ಸರಕಾರ ಶಿಕ್ಷಕರ ನೇಮಕಾತಿಯ ವಿಚಾರದಲ್ಲಿ ಹೊಸ ಹೊಸ ನಿಯಮಗಳನ್ನು ಆಗಾಗ ಜಾರಿಗೆ ತರುತ್ತಿದೆ. ಆದರೆ ಸರಕಾರದ ಹೊಸ ನಿಯಮದಿಂದಾಗಿ ಈ ಹಿಂದೆಯೇ ಪ್ರಾಥಮಿಕ ಶಾಲೆಗಳಿಗೆ ನೇಮಕಾತಿ ಆಗಿದ್ದ ಶಿಕ್ಷಕರಿಗೆ ಸಂಕಷ್ಟ ಎದುರಾಗಿತ್ತು.

ಇದನ್ನೂ ಓದಿ : ರಾಜ್ಯ ಸರ್ಕಾರ, ಬಿಬಿಎಂಪಿಯ ಮತ್ತೊಂದು ಎಡವಟ್ಟು: ಶಿಕ್ಷಕರ ಆಯ್ಕೆ ಹೊಣೆ ಸೆಕ್ಯೂರಿಟಿ ಏಜೆನ್ಸಿಗೆ

ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಿಕ್ಷಕರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಎಡ್‌ ಪದವಿಯನ್ನು ಪಡೆದಿರಬೇಕಾಗಿತ್ತು. ಆದರೆ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ಅನಿರುದ್ದ ಬೋಸ್‌ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯ ಅವರನ್ನು ಒಳಗೊಂಡ ಪೀಠವು ದೇವೇಶ್‌ ಶರ್ಮಾ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣದಲ್ಲಿನ ಹಿಂದಿನ ತೀರ್ಪನ್ನು ಉಲ್ಲೇಖಿಸಿ ಮಹತ್ವದ ತೀರ್ಪು ನೀಡಿದೆ.

ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ

ಭಾರತೀಯ ಸಂವಿಧಾನದಲ್ಲಿ ಶಿಕ್ಷಣ ಹಕ್ಕು ಕಾಯಿದೆ ಅಡಿಯಲ್ಲಿ ಹೇಳಲಾಗಿರುವಂತೆ ಭಾರತದಲ್ಲಿ ಪ್ರಾಥಮಿಕ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕು ಮತ್ತು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ನೀಡಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸರಕಾರಗಳು ತಮ್ಮದೇ ಆದ ನಿಯಮಗಳನ್ನು ರೂಪಿಸಿಕೊಂಡು ಶಿಕ್ಷಕರನ್ನು ಆಯ್ಕೆ ಮಾಡುತ್ತದೆ.

BEd Course not mandatory for recruitment of primary teachers: Supreme Court important order

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular