ಬೆಂಗಳೂರು : ಮೂಡ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲೀಗ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ದ ತನಿಖೆಗೆ ಖಾಸಗಿ ದೂರುದಾರರು ಅನುಮತಿ ಕೋರಬಹುದು. ಅಲಲ್ದೇ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿಯಲ್ಲಿ ಅನುಮತಿ ನೀಡಿರುವುದು ಸರಿಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಕರ್ನಾಟಕ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ಶಿಫಾರಸ್ಸುಗಳನ್ನು ರಾಜ್ಯಪಾಲರು ತಿರಸ್ಕಾರ ಮಾಡಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಿ ಕ್ರಮಕೈಗೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅಲ್ಲದೇ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್ ? ಮುಂದೇನು ?
ಮೂಡ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟಿನ ಮೆಟ್ಟಿಲೇರಲು ಅವಕಾಶವಿದೆ. ಆದರೆ ಹೈಕೋರ್ಟ್ ನೀಡಿರುವ ತೀರ್ಪಿನ ಬೆನ್ನಲ್ಲೇ ಲೋಕಾಯುಕ್ತರಿಗೆ ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್ ದಾಖಲಿಸಲು ಅವಕಾಶವಿದೆ. ಒಂದೊಮ್ಮೆ ಲೋಕಾಯುಕ್ತರು ಎಫ್ಐಆರ್ ದಾಖಲಿಸಿದ್ರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ.
ಇನ್ನು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಮೂಡ ಹಗರಣ ಸಿದ್ದರಾಮಯ್ಯ ಸಂಕಷ್ಟ ತಂದೊಡ್ಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದಂತೆ ಸಿದ್ದರಾಮಯ್ಯ ಕೂಡ ಬಂಧನಕ್ಕೂ ಮೊದಲೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ.
ಇನ್ನೊಂದೆಡೆಯಲ್ಲಿ ಸಿದ್ದರಾಮಯ್ಯ ವಿರುದ್ದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಲ್ಲಿಕೆ ಆಗಿರುವ ಪ್ರಕರಣದ ಕುರಿತು ನ್ಯಾಯಾಲಯ ಶೀಘ್ರದಲ್ಲಿಯೇ ತೀರ್ಪು ನೀಡುವ ಸಾಧ್ಯತೆಯಿದೆ. ಹೈಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿಯೂ ಸಿದ್ದರಾಮಯ್ಯಗೆ ರಿಲೀಫ್ ಸಿಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.
Karnataka High Court Dismisses CM Siddaramaiah case Application muda Land scam