HD Kumaraswamy vs IGP Chandrashekhar : ಬೆಂಗಳೂರು: ರಾಜ್ಯದಲ್ಲಿ ಐಪಿಎಸ್ ಅಧಿಕಾರಿ ಮತ್ತು ಕೇಂದ್ರ ಸಚಿವರ ನಡುವಿನ ಸಮರ ತಾರಕಕ್ಕೇರಿದೆ. ಲೋಕಾಯುಕ್ತ ಐಜಿಪಿ ಎಂ. ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಡಿದ್ದ ಭ್ರಷ್ಟಾಚಾರದ ಆರೋಪ ಈಗ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ.
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಶುಕ್ರವಾರ ಸಂಜೆ ನವದೆಹಲಿಯಿಂದ ಬಂದು ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಶನಿವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಹೆಚ್.ಡಿ. ಕುಮಾರಸ್ವಾಮಿ ಹಾಲಿ ಲೋಕಾಯುಕ್ತ ಐಜಿಪಿಯಾಗಿರುವ ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರದ ಬಹಿರಂಗ ಆರೋಪ ಮಾಡಿದ್ದರು.

ಕೇಂದ್ರ ಸಚಿವ ಕುಮಾರಸ್ವಾಮಿ ಗಂಭೀರ ಆರೋಪಕ್ಕೆ ಪ್ರತಿಯಾಗಿ ತಮ್ಮ ತಂಡಕ್ಕೆ ಸ್ಥೈರ್ಯ ತುಂಬುವ ರೀತಿಯಲ್ಲಿ ಪತ್ರ ಬರೆದಿದ್ದ ಐಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ಅವರನ್ನು ಆರೋಪಿ ಎಂದು ಉಲ್ಲೇಖಿಸಿದ್ದರಲ್ಲದೇ ಇಂಗ್ಲಿಷ್ ಕವಿ ಜಾರ್ಜ್ ಬರ್ನಾರ್ಡ್ ಶಾ ಅವರ ಹಂದಿಗಳ ಜೊತೆ ಗುದ್ದಾಡಬಾರದು, ಹಂದಿಗಳಿಗೆ ಮೂಲ ಹೊಲಸೇ ಇಷ್ಟ ಎಂಬ ಸಾಲುಗಳನ್ನು ಉಲ್ಲೇಖಿಸಿದ್ದರು. ಇದೀಗ ಹಂದಿ ಎಂಬ ಪದ ಬಳಕೆ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಮುಗಿಬಿದ್ದಿದ್ದಾರೆ.
ಇದನ್ನೂ ಓದಿ : ದಸರಾ ಹಬ್ಬ ಸಮೀಪದಲ್ಲೇ ಮೈಸೂರಿನಲ್ಲಿ ನಡೆಯಿತಾ ರೇವ್ ಪಾರ್ಟಿ?
ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಐಜಿಪಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್, ನನ್ನ ಪ್ರಶ್ನೆಗಳಿಗೆ ಆ ಅಧಿಕಾರಿ ಉತ್ತರ ಕೊಡಲಿ, ನಾನು ಎಲ್ಲಿ ಮಾತನಾಡಬೇಕೋ ಅಲ್ಲೇ ಮಾತನಾಡುತ್ತೇನೆ ಎಂದು ಕಿಡಿ ಕಾರಿದ್ದಾರೆ. ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ ಎಂದು ಹೇಳಿರುವ ಕುಮಾರಸ್ವಾಮಿ, ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಕೇಂದ್ರ ಸಚಿವ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಹಂದಿ ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಐಜಿಪಿ ಎಂ. ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಒದಿ : ನೇಪಾಳದಲ್ಲಿ ಪ್ರವಾಹ ಮತ್ತು ಭೂ ಕುಸಿತಕ್ಕೆ 112 ಜನ ಬಲಿ, 79 ಜನ ನಾಪತ್ತೆ
HD Kumaraswamy uses objectionable words Suggestion for action against IGP Chandrashekhar