Karnataka PUC Result 2025 : ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠೀ ನಡೆಸಿ ಫಲಿತಾಂಶ ಪಡೆದಿದ್ದಾರೆ. ರಾಜ್ಯದಲ್ಲಿ ಒಟ್ಟು 74.04 ಫಲಿತಾಂಶ ಬಂದಿದ್ದು, ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ ಒಟ್ಟು 93.90% ಫಲಿತಾಂಶ ದೊರಕಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಶೇ.93.57 ರಷ್ಟು ಫಲಿತಾಂಶ ದೊರೆಕಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಫರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆ 600 ರಲ್ಲಿ 599 ಅಂಕ ಪಡೆದಿರುತ್ತಾಳೆ. ಕಲಾ ವಿಭಾಗದಲ್ಲಿ ಬಳ್ಳಾರಿ ಇಂದು ಕಾಲೇಜಿನ ವಿದ್ಯಾರ್ಥಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600 ಅಂಕಕ್ಕೆ ಸಂಜನಾ 597 ಅಂಕ ಪಡೆದುಕೊಂಡಿದ್ದಾರೆ. ಬಳ್ಳಾರಿಯ ಕೆ.ನಿರ್ಮಲಾಗೆ 596 ಅಂಕ ಪಡೆದುಕೊಂಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದಿದ್ದವು. ಕರ್ನಾಟಕ ರಾಜ್ಯದ ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಎರಡು ದಿನಗಳ ಮೊದಲೇ ಫಲಿತಾಂಶ ಪ್ರಕಟವಾಗುತ್ತಿದೆ. ಇಲಾಖೆಯ ವೆಬ್ ಸೈಟ್ ಜೊತೆಗೆ ಆಯಾಯ ಕಾಲೇಜುಗಳಲ್ಲಿಯೂ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ : PUC Result 2025 : ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್ 8 (ನಾಳೆ) ಪ್ರಕಟ : ಫಲಿತಾಂಶಕ್ಕಾಗಿ ಕ್ಲಿಕ್ ಮಾಡಿ
Karnataka PUC Result 2025 : ಎಸ್ಎಂಎಸ್. ಡಿಜಿಲಾಕರ್‌ನಲ್ಲಿ ಫಲಿತಾಂಶ
ವಿದ್ಯಾರ್ಥಿಗಳಿಗೆ ಫಲಿತಾಂಶ ವೀಕ್ಷಣೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಬಾರಿ ವೆಬ್ಸೈಟ್ ಮಾತ್ರವಲ್ಲದೇ ಎಸ್‌ಎಂಎಸ್ ಹಾಗೂ ಡಿಜಿಲಾಕರ್ ಮೂಲಕವೂ ಫಲಿತಾಂಶ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಒಮ್ಮೆಲೆ ಫಲಿತಾಂಶ ವೀಕ್ಷಣೆಗೆ ವೆಬ್‌ಸೈಟ್ ಗೆ ಭೇಟಿ ನೀಡಿದ ವೇಳೆಯಲ್ಲಿ ವೆಬ್ಸೈಟ್ ಸರ್ವರ್ ಡೌನ್ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಸ್‌ಎಂಎಸ್ ಹಾಗೂ ಡಿಜಿಲಾಕರ್ ಮೂಲಕವೂ ಫಲಿತಾಂಶವನ್ನು ಪಡೆಯಬಹುದಾಗಿದೆ.
Karnataka PUC Result : ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಿಸುವುದು ಹೇಗೆ ?
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಫಲಿತಾಂಶವನ್ನು ವೀಕ್ಷಿಸಲು ಇಲಾಖಡಯ ಅಧಿಕೃತ ವೆಬ್‌ಸೈಟ್ karresults.nic.in ಹಾಗೂ kseab.karnataka.gov.in ಭೇಟಿ ನೀಡುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ. ವೆಬ್ಸೈಟ್ ಓಪನ್ ಆಗುತ್ತಲೇ Second PU Results 2025 ಅನ್ನು ಕ್ಲಿಕ್ ಮಾಡಿ, ನಂತರ ನಿಮ್ಮ ನೋಂದಣಿ ಸಂಖ್ಯೆಯ ಜೊತೆಗೆ ಪಾಸ್ ವರ್ಡ್ ನಮೂದಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.
Karnataka PUC Result 2025 Announced click here to Check in Kannada News