Heavy Rain Alert : ಉಡುಪಿ, ದ.ಕ ಜಿಲ್ಲೆಯಲ್ಲಿ 3 ದಿನ ರಣಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಉಡುಪಿ/ ಮಂಗಳೂರು : ಕರಾವಳಿಯಾದ್ಯಂತ ರೋಹಿಣಿ ಮಳೆ ಆರ್ಭಟಿಸುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಎಡೆ ಬಿಡದೆ ಮಳೆ ಸುರಿಯುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಉಡುಪಿ (Udupi) , ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯಲ್ಲಿ ರಣಮಳೆ (Heavy Rain Alert) ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಬಾರಿ ಅವಧಿಗೂ ಮೊದಲೇ ಮುಂಗಾರು ಆಗಮನವಾಗಿದೆ. ಕೇರಳಕ್ಕೆ ಮುಂಗಾರು ಆಗಮಿಸುವ ಮೊದಲೇ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಕಳೆದ ಹತ್ತು ದಿನಗಳಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ಕರ್ನಾಟಕದ ಕರಾವಳಿ ಭಾಗದ ಜನತೆ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಇದೀಗ ಮತ್ತೆ ರಣ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೇ 29ರಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಮಳೆ ಸುರಿಯಲಿದ್ದು, ಮಳೆಯ ಜೊತೆಗೆ ಬಾರೀ ಪ್ರಮಾಣದಲ್ಲಿ ಗಾಳಿ ಬೀಸಲಿದೆ. ಆದರೆ ಮೇ 30 ಹಾಗೂ 31 ರಂದು ಮಳೆಯ ಪ್ರಮಾಣ ಹೆಚ್ಚಳವಾಗಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಣಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Also Read : Ujjwala Yojana : ಉಜ್ವಲ ಯೋಜನೆ : ಕೇವಲ 300 ರೂ.ಗೆ ಸಿಗಲಿದೆ ಎಲ್‌ಪಿಜಿ ಸಿಲಿಂಡರ್

ಜೂನ್‌ 1ರ ನಂತರದಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಲಿದೆ. ಆದರೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಕೆಯಾಗಲಿದೆ. ಜೂನ್‌ 8 ರಂದು ಮೃಗಶಿರಾ ಮಳೆ ಆರಂಭವಾಗಿದ್ದು, ಜೂನ್‌ ಎರಡನೇ ವಾರದಲ್ಲಿ ವಾಡಿಕೆಯಂತೆ ಮಳೆಯ ಆರ್ಭಟ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Heavy Rain Alert : ಶಾಲಾರಂಭಕ್ಕೆ ಮಳೆಯ ಸ್ವಾಗತ

ಬೇಸಿಗೆ ರಜೆ ಕಳೆದ ಮೇ 29ರಿಂದಲೇ ಶಾಲೆಗಳು ಪುನರಾರಂಭಗೊಂಡಿದೆ. ಶಿಕ್ಷಕರು ಶಾಲೆಗಳಿಗೆ ತೆರಳಿ ಸ್ವಚ್ಚತಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಮೇ 30ರಂದು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಲಿದ್ದಾರೆ. ಆದರೆ ಈ ಬಾರಿ ಶಾಲಾರಂಭದ ದಿನದಂದೇ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಕೊಡಗು ಜಿಲ್ಲೆಯಲ್ಲಿ ಮೇ 29ರಂದು ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Also Read : ಬೇಸಿಗೆ ರಜೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್‌ ನ್ಯೂಸ್‌

ಚಾರ್ಮಾಡಿ ಘಾಟ್‌ನಲ್ಲಿ ಬಾರೀ ಮಳೆ, ಭೂ ಕುಸಿತದ ಆತಂಕ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ ಭಾಗಗಳಲ್ಲಿ ಬಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು, ಬೆಂಗಳೂರಿಗೆ ಸಂಪರ್ಕ ಕೊಂಡಿಯಂತೆ ಇರುವ ಚಾರ್ಮಾಡಿ ಘಾಟ್‌ ರಸ್ತೆಯ ಮೇಲೆಯೇ ಮಳೆ ನೀರು ನಂದಿಯಂತೆ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಚಾರ್ಮಾಡಿ ಘಾಟಿಯಲ್ಲಿ ಕುಸಿತವಾಗುವ ಆತಂಕ ಎದುರಾಗಿದೆ.

Heavy Rain Alert udupi Dakshina Kannada IMD in Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories