Heavy Rain School Holiday : ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ : ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು/ಉಡುಪಿ : ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಉಡುಪಿ (Udupi) ಹಾಗೂ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ (Heavy Rain School Holiday ) ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಳ್ಳೈ ಮುಗಿಲನ್‌ ಹಾಗೂ ಡಾ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೇ 30ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

Also Read : Ujjwala Yojana : ಉಜ್ವಲ ಯೋಜನೆ : ಕೇವಲ 300 ರೂ.ಗೆ ಸಿಗಲಿದೆ ಎಲ್‌ಪಿಜಿ ಸಿಲಿಂಡರ್

ಮೇ 30 ಹಾಗೂ 31 ರಂದು ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಅಧಿಕವಾಗಲಿದ್ದು ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಣಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಆದರೆ ಮೇ 1ರ ನಂತರ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗುವ ನಿರೀಕ್ಷೆ ಹೊಂದಲಾಗಿದೆ.

Also Read : KL Rahul : ಐಪಿಎಲ್‌ನಲ್ಲಿ ಶತಕ : 2026 ಟಿ20 ವಿಶ್ವಕಪ್‌ ಆಡ್ತಾರೆ ಕೆಎಲ್‌ ರಾಹುಲ್‌

Heavy Rain School Holiday : ಶಾಲಾರಂಭದ ದಿನವೇ ಶಾಲೆಗಳಿಗೆ ರಜೆ

ಬೇಸಿಗೆ ರಜೆ ಮುಗಿಸಿ ವಿದ್ಯಾರ್ಥಿಗಳು ಇಂದು ಶಾಲೆಗೆ ಆಗಮಿಸಬೇಕಾಗಿತ್ತು. ಆದರೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಾಲಾರಂಭದ ದಿನವೇ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿನ್ನೆ ಶಿಕ್ಷಕರು ಶಾಲೆಗಳಿಗೆ ತೆರಳಿ ಶಾಲಾರಂಭಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಇಂದು ಹಾಗೂ ನಾಳೆಯೂ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Also Read : Heavy Rain Alert : ಉಡುಪಿ, ದ.ಕ ಜಿಲ್ಲೆಯಲ್ಲಿ 3 ದಿನ ರಣಮಳೆ : ಹವಾಮಾನ ಇಲಾಖೆ ಎಚ್ಚರಿಕೆ

Udupi Dakshin Kannada Heavy Rain School Holiday Declared in Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories