ಕರಾವಳಿಯಲ್ಲಿ 1 ವಾರ ಬಾರೀ ಮಳೆ : ರೆಡ್‌ ಅಲರ್ಟ್‌, ಶಾಲೆಗಳಿಗೆ ರಜೆ ಘೋಷಣೆ

Karnataka weather report : ಉಡುಪಿ/ ಮಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ ಬಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್‌ 4 ರಂದು ಬಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಅರಬ್ಬಿ ಸಮುದ್ರದಲ್ಲಿ ಗಾಳಿಯ ಜೊತೆಗೆ ಅಲೆಗಳ ಅಬ್ಬರ ಜೋರಾಗಿದೆ. ಅಲ್ಲದೇ ಮುಂದಿನ ಒಂದು ವಾರ ಬಾರೀ ಮಳೆ ಸುರಿಯಲಿದೆ.

Karnataka weather report : ಕರಾವಳಿಯಲ್ಲಿ ರೆಡ್ ಅಲರ್ಟ್:

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 4 ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೊಷಿಸಲಾಗಿದೆ.

ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಒಂದು ವಾರಗಳ ಕಾಲ ಬಾರೀ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

Karnataka weather report : ಏನಿದು ರೆಡ್‌ ಅಲರ್ಟ್‌ ?

ರೆಡ್ ಅಲರ್ಟ್ ಎಂದರೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 204.5 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಇದು ಪ್ರವಾಹ, ಭೂಕುಸಿತ ಮತ್ತು ಜೀವಕ್ಕೆ ಅಪಾಯ ಉಂಟುಮಾಡಬಹುದು.

ರೆಡ್‌ ಅಲರ್ಟ್ ಘೋಷಿಸುವ ಜಿಲ್ಲೆಗಳಲ್ಲಿ ಬಹುತೇಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಅಂತೆಯೇ ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಶಾಲೆಗಳಿಗೆ ಜುಲೈ 4 ರಂದು ರಜೆ ನೀಡಲಾಗಿದೆ.

ಇದನ್ನೂ ಓದಿ : ಸುಕನ್ಯಾ ಸಮೃದ್ಧಿ ಯೋಜನೆ (SSY) : 10 ಸಾವಿರ ಹೂಡಿಕೆ ಮಾಡಿ 54 ಲಕ್ಷ ಪಡೆಯಿರಿ

ಆರೆಂಜ್ ಅಲರ್ಟ್ ಎಂದರೇನು ?

ಆರೆಂಜ್ ಅಲರ್ಟ್ ಎಂದರೆ 115.6 ಮಿ.ಮೀ ನಿಂದ 204.4 ಮಿ.ಮೀ ವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಇದು ರಸ್ತೆ ಸಂಚಾರಕ್ಕೆ ಅಡಚಣೆ, ಸ್ಥಳೀಯ ಪ್ರವಾಹ, ಮತ್ತು ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಕ್ಕೆ ಕಾರಣ ಆಗಬಹುದು.

ಮಳೆ ಮುನ್ಸೂಚನೆ:

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿಯಲ್ಲಿ ಮುಂದಿನ 10 ದಿನಗಳವರೆಗೂ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : ದೆಹಲಿ ಪ್ರವಾಸದ ವರೆಗೆ ಸಿದ್ದರಾಮಯ್ಯ ಸಿಎಂ : ಶಾಸಕ ಸುನಿಲ್‌ ಕುಮಾರ್‌ ವ್ಯಂಗ್ಯ

ಪ್ರವಾಹ ಮತ್ತು ಭೂಕುಸಿತದ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಪಾಲಿಸಬೇಕು.

ಈ ವಾರಾಂತ್ಯದಲ್ಲಿ ಮತ್ತು ಮುಂದಿನ ವಾರದಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ.

Karnataka weather report next 1 week Heavy rain Red alert School Holiday – Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories