ಶಾಲಾ ಮಕ್ಕಳಿಗೆ ಇನ್ಮುಂದೆ ಉಚಿತ ಬಸ್

ಬೆಂಗಳೂರು : ರಾಜ್ಯ ಸರಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ವಿದ್ಯಾರ್ಥಿಗಳಿಗೆ ಉಚಿತ ಬಸ್ (Free bus) ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. ಕರ್ನಾಟಕ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದಲೇ ಈ ಯೋಜನೆ ಜಾರಿಗೆ ಬರಲಿದೆ.
ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.
ಆರಂಭದಲ್ಲಿ ಈ ಬಸ್ ವ್ಯವಸ್ಥೆಯ ಅವಶ್ಯಕತೆ ಹೆಚ್ಚಿದೆಯೋ ಅಂತಹ ಪ್ರದೇಶಗಳಲ್ಲಿ ಉಚಿತ ಬಸ್ ವ್ಯವಸ್ಥೆಯನ್ನು ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.
Also Read : ಜುಲೈ 9 ಭಾರತ್ ಬಂದ್ : *ಶಾಲೆಗಳು ತೆರೆದಿರುತ್ತಾ ? ಯಾವೆಲ್ಲಾ ಸೇವೆಗಳು ಬಂದ್
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಆಕರ್ಷಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. 4-5 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲು ಯೋಜಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 285 ಕೆಪಿಎಸ್ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ 500 ಕ್ಕೂ ಹೆಚ್ಚು ಶಾಲೆಗಳನ್ನು ಆರಂಭಿಸುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ ಎಂದು ತಿಳಿಸಿದೆ.
ಕೆಪಿಎಸ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚದ ಹೊರೆಯನ್ನು ಕಡಿಮೆ ಮಾಡಿ, ಸುಲಭವಾಗಿ ಶಾಲೆಗೆ ತಲುಪಲು ಸಹಾಯ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದೆ.
Also Read : ಉಡುಪಿ : ಶಾಲಾ ಮಕ್ಕಳ ವಾಹನಗಳ ವಿರುದ್ದ ಪೊಲೀಸರ ವಾರ್ನಿಂಗ್, ಬಾರೀ ದಂಡ
Free bus for KPS school children says Madhu Bangarappa in Kannada News



