ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣ*ದಂಡನೆ ಫಿಕ್ಸ್..! ಕೇಂದ್ರ ಸುಪ್ರೀಂ ಕೋರ್ಟ್ಗೆ ಹೇಳಿದೇನು ?

ನವದೆಹಲಿ : ಕೇರಳದ ನರ್ಸ್ ನಿಮಿಷಾ ಪ್ರಿಯಾ (Kerala Nurse Nimisha Priya) ಮರಣದಂಡನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾರತ ಸರಕಾರ ಸುಪ್ರೀಂ ಕೋರ್ಟ್ಗೆ ಹೇಳಿಕೆಯನ್ನು ನೀಡಿದ್ದು, ಏನು ಮಾಡಲು ಸಾಧ್ಯವಿಲ್ಲ ಎಂದಿದೆ.
ಯೆಮೆನ್ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರೂಯ ಅವರನ್ನು ರಕ್ಷಿಸಲು ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತನ್ನ ಹೇಳಿಕೆ ತಿಳಿಸಿದೆ.
ನಿಮಿಷಾ ಪ್ರಿಯಾ ಅವರ ವಿಷಯದಲ್ಲಿ ಭಾರತ ಸರಕಾರ ನೇರವಾಗಿ ಮಧ್ಯಪ್ರವೇಶಿಸಲು ಇರುವ ಮಿತಿಗಳನ್ನು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಯೆಮೆನ್ನ ಕಾನೂನು ವ್ಯವಸ್ಥೆ ಮತ್ತು ಅಂತರಾಷ್ಟ್ರೀಯ ಕಾನೂನುಗಳ ಅಡಿಯಲ್ಲಿ ತಮ್ಮ ಕೈಗಳು ಕಟ್ಟಿಹಾಕಲ್ಪಟ್ಟಿವೆ ಎಂಬರ್ಥದಲ್ಲಿ ಹೇಳಿಕೆ ನೀಡಿದೆ.
Kerala Nurse Nimisha Priya : ಜುಲೈ 16ರಕ್ಕೆ ನಿಮಿಷಾ ಪ್ರಿಯಾಗೆ ಮರಣದಂಡನೆ
ನಿಮಿಷಾ ಪ್ರಿಯಾ ಅವರ ಮರಣದಂಡನೆಯು ಜುಲೈ 16, 2025 ಕ್ಕೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರ ತಾಯಿ ಪ್ರೇಮಕುಮಾರಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ಹಿನ್ನೆಲೆ: ನಿಮಿಷಾ ಪ್ರಿಯಾ 2017 ರಲ್ಲಿ ತನ್ನ ಯೆಮೆನ್ ವ್ಯವಹಾರ ಪಾಲುದಾರ ತಲಾಲ್ ಅಬ್ದೋ ಮಹ್ದಿ ಅವರ ಕೊಲೆ ಆರೋಪದ ಮೇಲೆ ಮರಣದಂಡನೆಗೆ ಗುರಿಯಾಗಿದ್ದಾರೆ.
ಕೇರಳ ಸರಕಾರದ ಪ್ರಯತ್ನವೇನು ?
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು.
ಅನೇಕ ರಾಜಕೀಯ ನಾಯಕರು, ಸಂಸದರು ಮತ್ತು ಸಾರ್ವಜನಿಕರು ನಿಮಿಷಾ ಪ್ರಿಯಾ ಅವರ ಬಿಡುಗಡೆಗಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಯೆಮೆನ್ ಸರ್ಕಾರದೊಂದಿಗೆ ನೇರ ಮಾತುಕತೆ, ಮೃತ ಯೆಮೆನ್ ನಾಗರಿಕನ ಸಂಬಂಧಿಕರೊಂದಿಗೆ ಮಾತುಕತೆ ನಡೆಸುವ ಪ್ರಯತ್ನಗಳೂ ನಡೆದಿವೆ.
ಸುಪ್ರೀಂ ಕೋರ್ಟ್ ವಿಚಾರಣೆ: ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಜುಲೈ 18, 2025 ಕ್ಕೆ ಮುಂದೂಡಿದೆ.
ಕೇಂದ್ರ ಸರ್ಕಾರವು ನೇರವಾಗಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರೂ, ಪ್ರಕರಣದ ವಿಚಾರಣೆಯು ಸುಪ್ರೀಂ ಕೋರ್ಟ್ನಲ್ಲಿ ಮುಂದುವರಿಯಲಿದೆ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳು ನಡೆಯುತ್ತಲೇ ಇವೆ.
Kerala Nurse Nimisha Priya Case Big Updates in Kannada News



