ಉಡುಪಿಯಲ್ಲಿ ಭಾರಿ ಮಳೆ : ಜುಲೈ 24ರಂದು ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಘೋಷಣೆ

Udupi School Holiday : ಉಡುಪಿ: ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜುಲೈ 24 ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಉಡುಪಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಜುಲೈ 24ರಂದು ಗುರುವಾರ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ.

ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ಆದೇಶ ಹೊರಡಿಸಿದ್ದಾರೆ.

Also Read : ಉಡುಪಿ : ಫೇಸ್‌ಬುಕ್‌ ಜಾಹೀರಾತು ನಂಬಿ 3 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Udupi School Holiday : ಉಡುಪಿಯಲ್ಲಿ ಬಾರೀ ಮಳೆ ರೆಡ್‌ ಅಲರ್ಟ್‌ ಘೋಷಣೆ

ನಿರಂತರ ಮಳೆ ಮತ್ತು ನದಿಗಳ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಕರಾವಳಿ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದೆ.

ಸಾರ್ವಜನಿಕರು ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಹಾಗೂ ನದಿ, ಕೆರೆ-ಕಟ್ಟೆಗಳ ಬಳಿ ಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ದಳ ಸನ್ನದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read : ಸ್ವರ್ಣ ನೂಪುರ 3ನೇ ವಾರ್ಷಿಕೋತ್ಸವ : ಯಕ್ಷ ಕಿನ್ನರ ಸಂಭ್ರಮ 2025

ಮುಂಗಾರು ಮಳೆಯು ಇನ್ನೆರಡು ದಿನಗಳ ಕಾಲ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Udupi Heavy Rain Holiday July 24 Schools and Colleges Kannada News

English News Just Click

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories