ಮಂಗಳೂರು ತಾಲೂಕಿನ ಶಾಲೆಗಳಿಗೆ ಜುಲೈ 24ರಂದು ರಜೆ ಘೋಷಣೆ

Mangalore School Holiday : ಮಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 24 ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯು ತನ್ನ ರೌದ್ರಾವತಾರವನ್ನು ಮುಂದುವರಿಸಿದೆ. ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಂಗಳೂರು ತಹಶೀಲ್ದಾರ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು ತಾಲೂಕಿನ ಅಂಗನವಾಡಿ ಗಳಿಂದ ಹಿಡಿದು ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜುಲೈ 24ರಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (IMD)ಯು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಬಾರೀ ಗಾಳಿ, ಮಳೆಯ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ರೆಡ್ ಅಲರ್ಟ್ ಘೋಷಿಸಿದ್ದು, ಜುಲೈ 24 ರಿಂದ ಜುಲೈ26ರ ವರೆಗೆ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಉಡುಪಿಯಲ್ಲಿ ಭಾರಿ ಮಳೆ : ಜುಲೈ 24ರಂದು ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಜುಲೈ 24 ರಂದು ರಜೆ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ನಿಂತರವಾಗಿ ಮಳೆ ಸುರಿಯುತ್ತಿದೆ. ಗುರುವಾರ ಬಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಜೊತೆಗೆ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ತೀರದಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ದಕ್ಷಿಣ ಕನ್ನಡ ಮೂಲದ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಭಾರತದ ಉಪರಾಷ್ಟ್ರಪತಿ
ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಸೂಚನೆ: ನದಿ, ಸಮುದ್ರ ತೀರ ಪ್ರದೇಶಕ್ಕೆ ಮತ್ತು ಅಪಾಯಕಾರಿ ತಗ್ಗು ಪ್ರದೇಶಗಳಿಗೆ ತೆರಳದಂತೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.
ತುರ್ತು ಪರಿಸ್ಥಿತಿ ಸನ್ನದ್ಧತೆ: ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸನ್ನದ್ಧವಾಗಿದೆ.
ಸಾರ್ವಜನಿಕರು ಹವಾಮಾನ ಇಲಾಖೆ ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
Extreme Rainfall Mangalore School Holiday july 24 Kannada News



