ಕರಾವಳಿಯಲ್ಲಿ ರಣಭೀಕರ ಮಳೆ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರಜೆ ಘೋಷಣೆ

ಉಡುಪಿ / ಮಂಗಳೂರು (Udupi/ Managluru) : ಧಾರಾಕಾರ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ (School Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಈ ಹಿನ್ನೆಲೆಯಲ್ಲಿ ಜುಲೈ 24ರಂದು ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೇ ಮಳೆ ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಯಿದೆ.

ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಣಭೀಕರ ಮಳೆ (Extremely Heavy Rain) ಸುರಿಯಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿಯಲ್ಲಿ ಭಾರೀ ಮಳೆ (Heavy Rain) ಸುರಿಯಲಿದೆ.

ಮಲೆನಾಡು, ದಕ್ಷಿಣ ಒಳನಾಡಿನ ಮಡಿಕೇರಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ (Very Heavy Rain) ನಿರೀಕ್ಷಿಸಲಾಗಿದೆ.

School Holiday : ಉಡುಪಿ, ದಕ ಜಿಲ್ಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ತೌಢಶಾಲೆ, ಪದವಿ ಪೂರ್ವ ಕಾಲೇಜು, ಐಟಿಐ ಕಾಲೇಜು ಹಾಗೂ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದ.ಕ ರಜೆ ವಿಚಾರದಲ್ಲಿ ಗೊಂದಲ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಆದರೆ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ವಿಚಾರದಲ್ಲಿ ಗೊಂದಲ ಏರ್ಪಟ್ಟಿದೆ. ಅಧಿಕಾರಿಗಳ ಜೊತೆಗೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ.

ಮಂಗಳೂರು ತಾಲೂಕಿನ ಶಾಲೆಗಳಿಗೆ ತಹಶೀಲ್ದಾರರು ರಾತ್ರಿಯೇ ರಜೆ ಘೋಷಿಸಿದ್ದಾರೆ. ಆದರೆ ಬೆಳಗ್ಗೆ ಒಂದೊಂದೆ ತಾಲೂಕಿನ ತಹಶೀಲ್ದಾರರು ಪ್ರತ್ಯೇಕವಾಗಿ ಆದೇಶ ಹೊರಡಿಸಿದ್ದು, ನಂತರ ಜಿಲ್ಲಾಧಿಕಾರಿಗಳು ಇಡೀ ಜಿಲ್ಲೆಗೆ ರಜೆ ಘೋಷಣೆ ಮಾಡಿದ್ದಾರೆ.

Also Read : ಉಡುಪಿಯಲ್ಲಿ ಭಾರಿ ಮಳೆ : ಜುಲೈ 24ರಂದು ಶಾಲೆ, ಪ.ಪೂ ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲಾಧಿಕಾರಿಗಳು, ತಹಶೀಲ್ದಾರರ ಪ್ರತ್ಯೇಕ ಆದೇಶಗಳು ಪೋಷಕರನ್ನು, ಮಕ್ಕಳನ್ನು ಗೊಂದಲಕ್ಕೀಡು ಮಾಡಿದೆ. ಕೆಲವು ವಿದ್ಯಾರ್ಥಿಗಳು ಶಾಲೆಗೆ ಹೊರಟು ಬಂದ ನಂತರದಲ್ಲಿ ಜಿಲ್ಲಾಡಳಿತ ರಜೆ ಘೋಷಿಸಿರೋದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

School Holiday : ಮುಂದಿನ ಒಂದು ವಾರ ಬಾರೀ ಮಳೆ

ಇನ್ನೂ ಒಂದು ವಾರಗಳ ಕಾಲ ಬಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ಮತ್ತು ಮಳೆಯ ಎಚ್ಚರಿಕೆ ನೀಡಿದೆ.

Also Read : ದಕ್ಷಿಣ ಕನ್ನಡ ಮೂಲದ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಭಾರತದ ಉಪರಾಷ್ಟ್ರಪತಿ

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು ನದಿ, ಸಮುದ್ರ ತೀರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.

Heavy Rain Red Alert Dakshina Kannada, Udupi Districts Declare School Holiday

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories