ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ಮುಂದಿನ ಆಯ್ಕೆ ಏನು ?

ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಸುದೀರ್ಘ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆಯ ಜೊತೆಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ, ಇದರಲ್ಲಿ ₹7 ಲಕ್ಷವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕೆಂದು ಆದೇಶಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ರೇವಣ್ಣ ಕುಟುಂಬದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ 2021ರಲ್ಲಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ.
ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಈ ಕೃತ್ಯವನ್ನು ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದರು ಅನ್ನೋದು ಪೊಲೀಸರ ತನಿಖೆಯಿಂದ ಸಾಬೀತಾಗಿದೆ. ಐಪಿಸಿ ಸೆಕ್ಷನ್ 376(2). 376 (2)(ಎನ್) ಅಡಿಯಲ್ಲಿ ದೋಷಿ ಎಂದು ಘೊಷಿಸಿದ್ದು, ಜೀವಾವಧಿ ಶಿಕ್ಷೆ ಪ್ರಕರಟಿಸಿದೆ.
Also Read : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ : ಮುನಿಯಾಲು ವಿರುದ್ದ ಹಿತರಕ್ಷಣಾ ವೇದಿಕೆ ಮುನಿಸು
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಇದು ಮೊದಲ ಪ್ರಕರಣವಾಗಿದೆ. ಉಳಿದ ಪ್ರಕರಣಗಳ ವಿಚಾರಣೆ ಮುಂದುವರಿಯಲಿದೆ.
ಪ್ರಜ್ವಲ್ ರೇವಣ್ಣಗೆ ಮುಂದಿನ ಆಯ್ಕೆ ಏನು ?
ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಾದ ಜೀವಾವಧಿ ಶಿಕ್ಷೆಯ ನಂತರ ಅವರಿಗೆ ಕೆಲವು ಕಾನೂನಾತ್ಮಕ ಆಯ್ಕೆಗಳಿವೆ. ಭಾರತೀಯ ಕಾನೂನು ವ್ಯವಸ್ಥೆಯಲ್ಲಿ, ಕೆಳ ನ್ಯಾಯಾಲಯಗಳು ನೀಡಿದ ತೀರ್ಪುಗಳನ್ನು ಮೇಲಿನ ನ್ಯಾಯಾಲಯಗಳಲ್ಲಿ ಪ್ರಶ್ನಿಸಬಹುದು. ಅವರ ಮುಂದಿನ ಆಯ್ಕೆಗಳು ಹೀಗಿರಬಹುದು:
ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ: ಪ್ರಜ್ವಲ್ ರೇವಣ್ಣ ಅವರ ವಕೀಲರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು.
ಹೈಕೋರ್ಟ್ ಪ್ರಕರಣದ ಎಲ್ಲಾ ದಾಖಲೆಗಳು, ಸಾಕ್ಷ್ಯಗಳು ಮತ್ತು ತೀರ್ಪನ್ನು ಪರಿಶೀಲಿಸಿ, ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಬಹುದು, ರದ್ದುಗೊಳಿಸಬಹುದು ಅಥವಾ ಶಿಕ್ಷೆಯನ್ನು ಕಡಿಮೆ ಮಾಡಬಹುದು.
ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ: ಒಂದು ವೇಳೆ ಹೈಕೋರ್ಟ್ ಸಹ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದರೆ, ಪ್ರಜ್ವಲ್ ರೇವಣ್ಣ ಅವರಿಗೆ ಭಾರತದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ.
ಇದು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಭ್ಯವಿರುವ ಅಂತಿಮ ಕಾನೂನು ಆಯ್ಕೆಯಾಗಿದೆ. ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ತಾವು ನಿರ್ದೋಷಿ ಎಂದು ವಾದಿಸಬಹುದು.
ಅಲ್ಲದೆ, ನ್ಯಾಯಾಲಯವು ಶಿಕ್ಷೆ ವಿಧಿಸಿದರೂ, ಅವರ ಮೇಲ್ಮನವಿ ವಿಚಾರಣೆ ನಡೆಯುತ್ತಿರುವಾಗ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು. ಆದರೆ ಇಂತಹ ಗಂಭೀರ ಪ್ರಕರಣಗಳಲ್ಲಿ ಜಾಮೀನು ಪಡೆಯುವುದು ಸುಲಭವಲ್ಲ.
Also Read : ಕಸ ಗುಡಿಸುವವನ ಬಳಿಯಲ್ಲಿ ಪತ್ತೆಯಾಯ್ತು 100 ಕೋಟಿ ಮೌಲ್ಯದ ಆಸ್ತಿ
ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹಲವಾರು ಇತರ ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದರಿಂದ, ಅವುಗಳ ವಿಚಾರಣೆ ಪ್ರತ್ಯೇಕವಾಗಿ ನಡೆಯಲಿದೆ. ಈ ಶಿಕ್ಷೆಯು ಒಂದು ಪ್ರಕರಣಕ್ಕೆ ಮಾತ್ರ ಸಂಬಂಧಿಸಿದ್ದು.
ಕೆಳ ನ್ಯಾಯಾಲಯದ ತೀರ್ಪಿನ ನಂತರ ಪ್ರಜ್ವಲ್ ರೇವಣ್ಣ ಅವರಿಗೆ ಮೇಲಿನ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ಆದರೆ ಕಾನೂನು ಪ್ರಕ್ರಿಯೆಗಳು ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.
Prajwal Revanna ife sentence, What is the next option?



