ಭಾರತೀಯ ನೌಕಾಪಡೆಯಲ್ಲಿ ಸುವರ್ಣಾವಕಾಶ: SSC ಕಾರ್ಯನಿರ್ವಾಹಕ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

Indian Navy Recruitment 2025: ಭಾರತದ ಮೂರು ಪ್ರಮುಖ ರಕ್ಷಣಾ ವ್ಯವಸ್ಥೆಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು ಮಾಹಿತಿ ತಂತ್ರಜ್ಞಾನದಲ್ಲಿ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.

ಭಾರತದ ರಕ್ಷಣಾ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಬೇಕೆಂದು ಬಯಸುವ ಅಭ್ಯರ್ಥಿಗಳಿಗೆ ಇದು ಸುರ್ವಣಾವಕಾಶವಾಗಿದೆ.

ಭಾರತೀಯ ನೌಕಾಪಡೆಯಲ್ಲಿ ಎಸ್‌ಎಸ್‌ಸಿ ಕಾರ್ಯನಿರ್ವಾಹಕರಾಗಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ನೌಕಾಪಡೆಯು ಒಟ್ಟ 15 ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಆಗಸ್ಟ್‌ 2 ರಿಂದ ಪ್ರಾರಂಭವಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್‌ 17 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ನೌಕಾಪಡೆಯಲ್ಲಿ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಮಾನದಂಡಗಳೇನು ?

ಹುದ್ದೆಯ ಹೆಸರು: SSC ಕಾರ್ಯನಿರ್ವಾಹಕ (ಮಾಹಿತಿ ತಂತ್ರಜ್ಞಾನ)

ವಯಸ್ಸಿನ ಮಿತಿ: SSC ಕಾರ್ಯನಿರ್ವಾಹಕ (ಮಾಹಿತಿ ತಂತ್ರಜ್ಞಾನ) ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜನವರಿ 02, 2001 ರಿಂದ ಜುಲೈ 01, 2006 ರ ನಡುವೆ ಜನಿಸಿರಬೇಕು. ಆ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಶಿಕ್ಷಣ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ಅಥವಾ 12 ನೇ ತರಗತಿ ಪಡೆದಿರಬೇಕು. ಅದರಲ್ಲಿ ಇಂಗ್ಲೀಷ್‌ ವಿಷಯದಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.

ಇದಲ್ಲದೇ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ (ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ, ಸಾಫ್ಟ್‌ವೇರ್ ತಂತ್ರಜ್ಞಾನ, ಸಾಫ್ಟ್‌ವೇರ್ ಸಿಸ್ಟಮ್, ಸೈಬರ್ ಸೆಕ್ಯುರಿಟಿ, ಡೇಟಾ ಅನಾಲಿಟಿಕ್ಸ್) ವಿಷಯಗಳಲ್ಲಿ ಎಂಎಸ್ಸಿ, ಬಿಇ, ಬಿಟೆಕ್ ಅಥವಾ ಎಂಟೆಕ್ ಪದವಿ ಪಡೆದಿರಬೇಕು.

ಕಂಪ್ಯೂಟರ್ ಸೈನ್ಸ್ ಅಥವಾ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ BCA ಅಥವಾ B.Sc ಜೊತೆಗೆ MCA ಮಾಡಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ಎಸ್‌ಬಿಐ‌ ಪ್ರೊಬೇಷನರಿ ಆಫೀಸರ್ ನೇಮಕಾತಿ : ₹48,480 ವೇತನ

ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100 ರೂ. ವೇತನ ನೀಡಲಾಗುವುದು.

ಆಯ್ಕೆ: ಅಭ್ಯರ್ಥಿಗಳನ್ನು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಶಾರ್ಟ್‌ಲಿಸ್ಟ್, ಸಂದರ್ಶನ ಇತ್ಯಾದಿಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಏನೇನು ದಾಖಲೆಗಳು ಬೇಕು? ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ತಮ್ಮ 10 ಮತ್ತು 12 ನೇ ತರಗತಿ ಪ್ರಮಾಣಪತ್ರ, ಪದವಿ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣಪತ್ರ, ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಇತರ ನಿಗದಿತ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ ಹೇಗೆ? ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 17, 2025.

ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾಪಡೆಯ ಈ ಅಧಿಸೂಚನೆ ಪರಿಶೀಲಿಸಿ.

ಇದನ್ನೂ ಓದಿ: Indian Bank Jobs: ಇಂಡಿಯನ್‌ ಬ್ಯಾಂಕ್‌ 1500 ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ಆಗಸ್ಟ್‌ 7 ಕೊನೆ ದಿನ

Indian Navy Recruitment 2025 appl ssc executive post in online within August 17 in kannada

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories