ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು : ಕೃಷ್ಣ ಶೆಟ್ಟಿ

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಪುನರ್ ನಿರ್ಮಾಣಕ್ಕಾಗಿ ಸ್ಥಾಪಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತು ಗೊಳಿಸುವುದಾಗಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಅವರು ಘೋಷಿಸಿದ್ದಾರೆ.
ಕಾರ್ಕಳದ ಬೈಲೂರು ಸಮೀಪದ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿ ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಉದ್ದೇಶದಿಂದಲೇ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ಸ್ಥಾಪಿಸಲಾಗಿತ್ತು. ಇದೊಂದು ರಾಜಕೀಯೇತರ ಸಮಿತಿಯಾಗಿದೆ.
ಕಾಂಗ್ರೆಸ್ ಹಿರಿಯ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ ವರು ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನು ಇಟ್ಟುಕೊಂಡು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಸಮಿತಿ ಯಾವುದೇ ನಿರ್ಣಯ ಕೈಗೊಂಡರೂ ಕೂಡ ಕಾನೂನು ತೊಡಕು ಉಂಟಾಗಲಿದೆ.
Also Read : ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐಗೂ ಹೋರಾಟಗಾರರಿಗೂ ಏನು ಸಂಬಂಧ ?
ಈ ಹಿನ್ನೆಲೆಯಲ್ಲಿ ಉದಯ್ ಕುಮಾರ್ ಶೆಟ್ಟಿ ಅವರು ಸಲ್ಲಿಕೆ ಮಾಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಬೆಂಬಲವಾಗಿ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಕೃಷ್ಣ ಶೆಟ್ಟಿ ಅವರು ತಿಳಿಸಿದ್ದಾರೆ.
ಉದಯ್ ಕುಮಾರ್ ಶೆಟ್ಟಿ ಅವರ ಕಾನೂನಾತ್ಮಕ ಹೋರಾಟಕ್ಕೆ ಬೆಂಬಲವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೀಗಾಗಿ ಇನ್ಮುಂದೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಅಸ್ಥಿತ್ವದಲ್ಲಿ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also Read : ಪರಶುರಾಮ ಮೂರ್ತಿ ಸ್ಥಾಪನೆಗೆ ತಿಂಗಳ ಗಡುವು
Parashurama Theme Park Controversy Big Updates Welfare Committee dismissed says President Krishna Shetty



